Publish Date: Thu, 25 May 2023 (08:05 IST)
Updated Date: Thu, 25 May 2023 (09:53 IST)
ಮೈಸೂರು : `ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು ಎಂಬ ಹೇಳಿಕೆ ನೀಡಿದ್ದ ಆರೋಪದ ಮೇಲೆ ಮಾಜಿ ಸಚಿವ ಅಶ್ವಥ್ ನಾರಾಯಣ್ ಅವರ ವಿರುದ್ಧ FIR ದಾಖಲಾಗಿದೆ.
ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ ಅವರ ಹತ್ಯೆಗೆ ಪ್ರಚೋದಿಸುವಂತೆ ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದರು. ಹೇಳಿಕೆ ಖಂಡಿಸಿ, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ದೂರು ಸಲ್ಲಿಸಿ ಬಹಳ ದಿನಗಳಾಗಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಬುಧವಾರ (ಮೇ 24) ಎಫ್ಐಆರ್ ದಾಖಲಿಸುವಂತೆ ಮತ್ತೊಮ್ಮೆ ದೂರು ಸಲ್ಲಿಸಿದರು.
ದೂರು ಸ್ವೀಕರಿಸಿದ ಪೊಲೀಸರು ಮಾಜಿ ಸಚಿವರ ವಿರುದ್ಧ ಕೊಲೆ ಬೆದರಿಕೆ, ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸುವುದಾಗಿ ಹೇಳಿದ್ದಾರೆ.