Webdunia - Bharat's app for daily news and videos

Install App

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

Sampriya
ಶನಿವಾರ, 2 ಆಗಸ್ಟ್ 2025 (19:30 IST)
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ವೇಳೆ ಮತಗಳ್ಳತನವಾಗಿದೆ ಎಂಬ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಆರೋಪ ಸಂಬಂಧ ಭಾರತೀಯ ಜನತಾ ಪಕ್ಷವು ಆಗಸ್ಟ್ 5 ರಂದು ವಿಧಾನಸೌಧದ ಬಳಿಯ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. 

ಬಿಜೆಪಿ ರಾಜ್ಯ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು, ಪ್ರತಿಭಟನೆಯ ನಂತರ ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಔಪಚಾರಿಕ ಮನವಿ ಸಲ್ಲಿಸಲಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು. 

ರಾಹುಲ್ ಗಾಂಧಿ ಅವರು ಆಗಸ್ಟ್ 5 ರಂದು ಬೆಂಗಳೂರಿಗೆ ಭೇಟಿ ನೀಡಿದಾಗ ರಾಜಕೀಯ "ನಾಟಕ" ಎಸಗಲು ಯೋಜಿಸಿದ್ದಾರೆ ಎಂದು ಅವರು ಆರೋಪಿಸಿದರು. 

ಪ್ರತಿಭಟನೆಯಲ್ಲಿ ಸಂಸದರು, ಶಾಸಕರು, ಎಂಎಲ್‌ಸಿಗಳು, ಮಾಜಿ ಸಂಸದರು ಮತ್ತು ಶಾಸಕರು ಮತ್ತು ಬಿಜೆಪಿಯ ಮಾಜಿ ಎಂಎಲ್‌ಸಿಗಳು ಭಾಗವಹಿಸಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು. 
ಮತಗಳ್ಳತನ ಆರೋಪ ಸಂಬಂಧ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಕರ್ನಾಟಕದ ಜನತೆಯ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು.

ಇತ್ತೀಚಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ವಿವಿಧ ರಾಜ್ಯಗಳಲ್ಲಿ ವ್ಯಾಪಕ ಚುನಾವಣಾ ವಂಚನೆಯಾಗಿದೆ ಎಂದು ಆರೋಪಿಸಿ ರಾಜ್ಯದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಇದಕ್ಕೆ ಪ್ರತೀತಂತ್ರ ಹೆಣೆಯಲು ಬಿಜೆಪಿ ಕೂಡಾ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಮುಂದಿನ ಸುದ್ದಿ
Show comments