ಹೊಯ್ಸಳ ಪೊಲೀಸ್ ಸಿಬ್ಬಂದಿ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

Webdunia
ಮಂಗಳವಾರ, 31 ಅಕ್ಟೋಬರ್ 2017 (08:57 IST)
ಬೆಂಗಳೂರು: ದುಷ್ಕರ್ಮಿಗಳ ತಂಡ ಜಾಲಹಳ್ಳಿ ಪೊಲೀಸ್ ಹೊಯ್ಸಳ ಸಿಬ್ಬಂದಿ ಮೇಲೆ ದಾಳಿ ಮಾಡಿರುವ ಘಟನೆ  ನಿನ್ನೆ ತಡರಾತ್ರಿ ನಡೆದಿದೆ.

ಎರಡು ಡಿಯೋ ಬೈಕ್ ನಲ್ಲಿ ಮುಸುಕು ಹಾಕಿಕೊಂಡು ನಾಲ್ವರು ಸುಲಿಗೆಕೋರರು ಈ ಕೃತ್ಯವೆಸಗಿದ್ದಾರೆ. ನಗರದ ಬಿಇಎಲ್ ಸರ್ಕಲ್‍ ನಲ್ಲಿ ರಾತ್ರಿ 2.30ರ ಸುಮಾರಿಗೆ ಪಾರ್ಕ್ ಮಾಡಿದ್ದ ಕ್ಯಾಬ್ ಚಾಲಕರಿಗೆ ಲಾಂಗ್ ತೋರಿಸಿ ಹಣ, ಪರ್ಸ್, ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ.

ಹಣ ಕಳೆದುಕೊಂಡ ಕ್ಯಾಬ್ ಚಾಲಕ ಕೂಡಲೇ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ದೂರು ನೀಡಿದ್ದಾರೆ. ಈ ವೇಳೆ ರಾತ್ರಿ ಗಸ್ತಿನಲ್ಲಿದ್ದ ಜಾಲಹಳ್ಳಿ ಪೊಲೀಸ್ ಹೊಯ್ಸಳ ಸಿಬ್ಬಂದಿ ದರೋಡೆಕೋರರ ಬೆನ್ನು ಹತ್ತಿದ್ದು, ಸಿಬ್ಬಂದಿ ಕಾರಿನಿಂದ ಕೆಳಗಿಳಿಯುತ್ತಿದ್ದಂತೆ ದುಷ್ಕರ್ಮಿಗಳು ಲಾಂಗ್ ನಿಂದ ಹಲ್ಲೆ ಮಾಡಿದ್ದಾರೆ. ಪರಿಣಾಮ ಹೋಂ ಗಾರ್ಡ್ ಹನುಮಂತರಾಜು ತಲೆಗೆ ಗಂಭೀರ ಗಾಯವಾಗಿದೆ.

ಸದ್ಯ ಹೋಂ ಗಾರ್ಡ್ ಹನುಮಂತರಾಜುರನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಯ್ಸಳದಲ್ಲಿದ್ದ ಎಎಸ್‍ಐ ಮೋಪುರಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ಸಂಬಂಧ ಜಾಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಹೈದರಾಬಾದ್‌: ತಪ್ಪಾದ ಇಂಜೆಕ್ಷನ್‌ಗೆ ಕೋಮಾಕ್ಕೆ ಜಾರಿದ ಮಹಿಳೆ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

ಪಾಕಿಸ್ತಾನದ ಅವಸ್ಥೆಯೇ... ಶ್ರೀಲಂಕಾಗೆ ಅವಧಿ ಮೀರಿದ ಆಹಾರ ಸಾಮಗ್ರಿ ಕಳುಹಿಸಿದ ಪಾಕ್

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಮುಂದಿನ ಸುದ್ದಿ
Show comments