ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಆ್ಯಸಿಡ್ ದಾಳಿ ನಡೆದಿದೆ.
ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ ಮಾಡಿರುವ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ 10ನೇ ಕ್ರಾಸ್ನಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಜನತಾ ಅದಕ್ ತನ್ನ ಸ್ನೇಹಿತನಿಗೆ ಆ್ಯಸಿಡ್ ಎರಚಿದ್ದಾನೆ. ಜನತಾ ಅದಕ್ ಹಾಗೂ ಸಂತ್ರಸ್ತ ಬೆಳ್ಳಿ ಪಾಲಿಶ್ ಅಂಗಡಿಯಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದರು.
ಆದರೆ ಭಾನುವಾರ ರಾತ್ರಿ ಇಬ್ಬರ ನಡುವೆ ಜಗಳವಾಗಿತ್ತು. ಜನತಾ ಅದಕ್ ಹಾಗೂ ಸಂತ್ರಸ್ತ ಕುಡಿದು ಗಲಾಟೆ ಮಾಡಿಕೊಂಡಿದ್ದರು.
ಈ ವೇಳೆ ಸಂತ್ರಸ್ತ ಮೊಬೈಲ್ನಲ್ಲಿ ವೀಡಿಯೋ ಮಾಡಲು ಮುಂದಾಗಿದ್ದ. ಇದರಿಂದ ಕೋಪಗೊಂಡ ಜನತಾ ಅದಕ್ ಬೆಳ್ಳಿ ಪಾಲಿಶ್ ಮಾಡಲು ತಂದಿದ್ದ ಡೈಲೂಟ್ ಆ್ಯಸಿಡ್ ಎರಚಿ ಕೃತ್ಯವೆಸಗಿದ್ದಾನೆ.