Select Your Language

Notifications

webdunia
webdunia
webdunia
webdunia

ಅನೌಪಚಾರಿಕ ಚಹಾಕೂಟ ಏರ್ಪಡಿಸಿ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ ಹಂಗಾಮಿ ಸಿಎಂ

ಅನೌಪಚಾರಿಕ ಚಹಾಕೂಟ ಏರ್ಪಡಿಸಿ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ ಹಂಗಾಮಿ ಸಿಎಂ
bangalore , ಮಂಗಳವಾರ, 16 ಮೇ 2023 (19:00 IST)
ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು...ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರದ ಅಧಿಕಾರಗಳಿಗೆ ಚಹಾ ಕೂಟ ಏರ್ಪಡಿಸಿ ಅನೌಪಚಾರಿಕವಾಗಿ ಮಾತನಾಡಿ, ನಾವು ಸಂವಿಧಾನ ಒಪ್ಪಿಕೊಂಡಿದ್ದೇವೆ..ಆಡಳಿತದಲ್ಲಿ ಕಾರ್ಯಾಂಗ, ಶಾಸಕಾಂಗ ಎರಡೂ ಪ್ರಮುಖ ಪಾತ್ರ ವಹಿಸುತ್ತವೆ. ನಾವು ಅದರ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ನಾನು ಅಧಿಕಾರಕ್ಕೆ ಬಂದಾಗ ಕೋವಿಡ್, ಪ್ರವಾಹ ಸಂದರ್ಭ ಎದುರಾಯಿತು. ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ್ದೇವೆ. ನಮ್ಮ ಆಡಳಿತದಲ್ಲಿ ಯಾವುದೇ ಹಿಂಸಾತ್ಮಕ ಚಟುವಟಿಕೆಗಳು ನಡೆಯಲಿಲ್ಲ. ಚುನಾವಣೆ ಸಂದರ್ಭದಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ. ಗೃಹ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ...ನಾವು ಅನೇಕ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಮೀಸಲಾತಿ ಹೆಚ್ಚಳ, ಸರ್ಕಾರಿ ನೌಕರರ ಸವಾಲು, ಹೊಸ ನೀತಿಗಳನ್ನು ಜಾರಿಗೆ ತಂದಿದ್ದೇವೆ. ಉದ್ಯೋಗ ನೀತಿ, ಕೈಗಾರಿಕಾ ನೀತಿ ಎಲ್ಲ ಹೊಸ ಯೊಜನೆಗಳ ತರಲು ಅಧಿಕಾರಿಗಳ ಪಾತ್ರ ಮಹತ್ವದ್ದು, ನಿಮ್ಮ ಸಹಕಾರ ಅತ್ಯಂತ ಮುಖ್ಯವಾಗಿತ್ತು ಎಂದರು

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ನಾಯಕರ ವಿರುದ್ಧ ಅಶ್ವಥ್ ನಾರಾಯಣ್ ವಾಗ್ದಾಳಿ