Webdunia - Bharat's app for daily news and videos

Install App

ಪಕ್ಷದ ವರಿಷ್ಠರ ಜತೆ ಚರ್ಚಿಸಿ ಸೂರಜ್ ವಿರುದ್ಧ ಕ್ರಮ: ಜಿಟಿ ದೇವೇಗೌಡ

Sampriya
ಭಾನುವಾರ, 23 ಜೂನ್ 2024 (13:48 IST)
ಮೈಸೂರು: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿಯಲ್ಲಿ ಬಂಧನವಾಗಿರುವ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಕ್ರಮ ಜರುಗಿಸುವ ಕುರಿತು ಪಕ್ಷದ ವರಿಷ್ಠರ ಜತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆಂದು ಜೆಡಿಎಸ್‌ ಪ್ರಮುಖರ ಸಮಿತಿಯ ಅಧ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದರು.

ಇಂದು ಸೂರಜ್ ರೇವಣ್ಣ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಅವರು,  ಪ್ರಕರಣದ ಬಗ್ಗೆ ನನಗೆ ಮಾಹಿತಿ ಇಲ್ಲ. ಸೂರಜ್‌ ಅವರನ್ನು ಬಂಧಿಸಿರುವ ವಿಷಯವೂ ನಿಮ್ಮಿಂದಲೇ (ಮಾಧ್ಯಮದಿಂದ) ತಿಳಿಯಿತು. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಚಾರದಲ್ಲೂ ನಮ್ಮ ಪಕ್ಷ ಯಾವುದೇ ಹಸ್ತಕ್ಷೇಪ ಮಾಡಿಲ್ಲ. ಆರೋಪಿಗಳು ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇ ಬೇಕೆಂದರು.

ಜೆಡಿಎಸ್ ಪಕ್ಷ ತಪ್ಪು ಮಾಡಿದವರ ಪರ ನಿಲ್ಲುವುದಿಲ್ಲ. ನನ್ನ ಮಗನೇ ಇರಲಿ, ನನ್ನ ಸಂಬಂಧಿಗಳೇ ಇರಲಿ, ಯಾರೇ ತಪ್ಪು ಮಾಡಿದರೂ ತಪ್ಪೇ ಶಿಕ್ಷೆ ಆಗಲೇ ಬೇಕೆಂದರು. ಸೂರಜ್ ರೇವಣ್ಣ ಬಂಧನದಿಂದ ಪಕ್ಷಕ್ಕೆ ಮುಜುಗರವೇಕೆ ಎಂದು ಕೇಳಿದ ಅವರು, ರಾಜ್ಯದಲ್ಲಿ ಯಾರೋ ಒಬ್ಬ ತಪ್ಪು ಮಾಡಿದರೆ ಅದಕ್ಕೆ ಆರೂವರೆ ಕೋಟಿ ಜನ ಕಾರಣವೇ? ಅಲ್ಲ ತಾನೇ? ಇದೂ ಹಾಗೆಯೇ ಎಂದು ಪ್ರತಿಕ್ರಿಯಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ