Select Your Language

Notifications

webdunia
webdunia
webdunia
webdunia

ಪಠ್ಯಕ್ರಮದಲ್ಲಿ ನಾಡಿನ ವೀರ ಮಹಿಳೆಯರ ಕುರಿತ ಪಾಠಗಳ ಅಳವಡಿಕೆಗೆ ಕ್ರಮ: ಸಿಎಂ

ಪಠ್ಯಕ್ರಮದಲ್ಲಿ ನಾಡಿನ ವೀರ ಮಹಿಳೆಯರ ಕುರಿತ ಪಾಠಗಳ ಅಳವಡಿಕೆಗೆ ಕ್ರಮ: ಸಿಎಂ
bangalore , ಸೋಮವಾರ, 28 ಫೆಬ್ರವರಿ 2022 (20:55 IST)
ಮುಂದಿನ ಪೀಳಿಗೆಗೆ ನಾಡಿನ ವೀರ ಮಹಿಳೆಯರಾದ ಬೆಳವಾಡಿ ಮಲ್ಲಮ್ಮ, ಕೆಳದಿ ಚೆನ್ನಮ್ಮನ, ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕ್ಕ ಅವರ ಕುರಿತಾದ ಪಾಠಗಳನ್ನು ಪಠ್ಯಕ್ರಮದಲ್ಲಿ ಅಳವಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
ಅವರು ಇಂದು ಬೆಳವಡಿ ಮಲ್ಲಮ್ಮ ಮರಾಠಾ ಸೈನ್ಯದ ವಿರುದ್ಧ ಜಯಗಳಿಸಿದ 374 ನೇ ವರ್ಷಾಚರಣೆಗೆ ಚಾಲನೆ ನೀಡಿದರು.
ಬೆಳವಡಿಯ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ.
ನಿನ್ನೆ ಕೆಳದಿ ಚೆನ್ನಮ್ಮನ ಪಟ್ಟಾಭಿಷೇಕದ 350ನೇ ವರ್ಷದ ಆಚರಣೆಯನ್ನೂ ಮಾಡಿದ್ದೇವೆ. ಕರ್ನಾಟಕಕ್ಕೆ ಮಹಿಳೆಯರ ಕೊಡುಗೆ ಅಪಾರವಾಗಿದೆ. ಅದು ಇಂದಿನ ಪೀಳಿಗೆಗೆ ತಿಳಿಸಬೇಕು. ಕಿತ್ತೂರು ರಾಣಿ ಚೆನ್ನಮ್ಮ ಮೊದಲುಗೊಂಡು ಮಹಿಳೆಯರ ಪಾತ್ರವನ್ನು ಪ್ರಮುಖವಾಗಿ ಯುವಜನಾಂಗಕ್ಕೆ ತಿಳಿಸುವ ಕೆಲಸವಾಗಬೇಕು.
ಮುಂದಿನ ವರ್ಷ ಬೆಳಡಿಯಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮಗಳು ನಡೆಯುತ್ತಿದ್ದವು.
ಈ ಸಂಸ್ಥಾನ ಬೆಳೆದು ಬಂದ ರೀತಿ, ಶಿವಾಜಿ ಮಹಾರಾಜರ ವಿರುದ್ಧ ಅವರ ಹೋರಾಟದ ಬಗ್ಗೆ ಪಂಚಮಸಾಲಿ ಪೀಠದ ಜಗದ್ಗುರು ಶ್ರೀವಚನಾನಂದ ಸ್ವಾಮಿಗಳಿಗೆ ಅಪಾರ ಜ್ಞಾನವಿದೆ. ಅವರ ಕಳಕಳಿ, ನಾಡಿನ ಬಗ್ಗೆ ಅವರ ಪ್ರೀತಿಯಿಂದ ಕಾರ್ಯಕ್ರಮ ಆಯೋಜನೆಗೊಂಡಿತು ಎಂದು ಅಭಿನಂದಿಸಿದರು.
 
ಈ ಸಂದರ್ಭದಲ್ಲಿ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀವಚನಾನಂದ ಸ್ವಾಮೀಜಿ, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್, ಶಾಸಕ ಅರುಣ್ ಶಾಹಪುರ, ಮಾಜಿ ಶಾಸಕ ಮೋಹನ್ ಲಿಂಬಿಕಾಯಿ ಮತ್ತು ಎ.ಟಿ.

Share this Story:

Follow Webdunia kannada

ಮುಂದಿನ ಸುದ್ದಿ

ರಷ್ಯಾ ದಾಳಿಗೆ ಉಕ್ರೇನ್ ಪ್ರತೀಕಾರ: 3,500 ಕ್ಕೂ ಹೆಚ್ಚು ರಷ್ಯನ್ ಸೈನಿಕರ ಸಾವು