Webdunia - Bharat's app for daily news and videos

Install App

ಮೈಕ್ರೋಫೈನಾನ್ಸ್‌ ಕಡಿವಾಣಕ್ಕೆ ಶೀಘ್ರದಲ್ಲೇ ಕ್ರಮ: ಸಿಎಂ ಸಿದ್ದರಾಮಯ್ಯ

Sampriya
ಶುಕ್ರವಾರ, 31 ಜನವರಿ 2025 (17:52 IST)
ಸುತ್ತೂರು:  ಮೈಕ್ರೊಫೈನಾನ್ಸ್‌ ಕಂಪನಿಗಳಿಗೆ ಕಡಿವಾಣ ಹಾಕಲು ಶೀಘ್ರದಲ್ಲೇ ಸುಗ್ರೀವಾಜ್ಞೆ ತರುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಇಲ್ಲಿ ಸುತ್ತೂರು ಮಠದಿಂದ ಶುಕ್ರವಾರ ಆಯೋಜಿಸಿದ್ದ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರ ನಿಮ್ಮ ಜತೆಗಿದೆ ಎಂದು ಅಭಯ ನೀಡಿದರು.

ಆರ್‌ಬಿಐ (ಭಾರತೀಯ ರಿಸರ್ವ್ ಬ್ಯಾಂಕ್‌) ನಿಯಮಾವಳಿ ಉಲ್ಲಂಘಿಸುವ, ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೊ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ. ಜನರು ಆತಂಕಕ್ಕೆ ಒಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಮಾಡಬಾರದು ಎಂದು ಕೋರಿದರು.

ಮೈಕ್ರೊ ಫೈನಾನ್ಸ್ ವ್ಯವಸ್ಥೆಗಳು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಆರ್‌ಬಿಐ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುತ್ತವೆ. ಆದ್ದರಿಂದ ಅವುಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಸುಗ್ರೀವಾಜ್ಞೆ ಹೊರಡಿಸಿ, ಕಿರುಕುಳ ನೀಡುತ್ತಿರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments