Select Your Language

Notifications

webdunia
webdunia
webdunia
webdunia

ಎನ್ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ: ಸಿದ್ದರಾಮಯ್ಯ

ಎನ್ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ: ಸಿದ್ದರಾಮಯ್ಯ
ಬೆಂಗಳೂರು , ಗುರುವಾರ, 22 ಜೂನ್ 2023 (13:34 IST)
ಬೆಂಗಳೂರು : ನ್ಯಾಷನಲ್ ಕೋ-ಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಷನ್, ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ ಹಾಗೂ ಕೇಂದ್ರೀಯ ಭಂಡಾರ ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಅಲ್ಲಿಂದ ಅಕ್ಕಿ ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
ಅವರು ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾರತೀಯ ಆಹಾರ ಮಂಡಳಿಯಿಂದ 34 ರೂ. ಅಕ್ಕಿ, 2.60 ರೂ. ಸಾಗಾಣಿಕೆ ವೆಚ್ಚ ಸೇರಿ ಒಂದು ಕೆಜಿ ಅಕ್ಕಿಗೆ ಒಟ್ಟು 36.40 ರೂ. ವೆಚ್ಚ ತಗಲುತ್ತದೆ. ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು. ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ರಾಗಿ, ಜೋಳವನ್ನು 6 ತಿಂಗಳವರೆಗೆ ತಲಾ 2 ಕೆಜಿ ಕೊಡುವಷ್ಟು ಮಾತ್ರ ದಾಸ್ತಾನು ಲಭ್ಯವಿದೆ. ಹಳೆ ಮೈಸೂರು ಭಾಗದ ಜನರಿಗೆ 2 ಕೆಜಿ ರಾಗಿ ಹಾಗೂ ಹೈದರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಭಾಗದ ಜನರಿಗೆ 2 ಕೆಜಿ ಜೋಳ ನೀಡಬಹುದು. ಇನ್ನುಳಿದ 3 ಕೆಜಿ ಅಕ್ಕಿಯನ್ನು ರಾಜ್ಯದ ಜನರಿಗೆ ನೀಡಬೇಕಾಗುತ್ತದೆ ಎಂದರು.

 

Share this Story:

Follow Webdunia kannada

ಮುಂದಿನ ಸುದ್ದಿ

ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ತಪ್ಪದೇ ಚಾಲನೆ