ರಾಜ್ಯದಲ್ಲಿ ಸುಮಾರು 15 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರ ಪ್ರಕಟಣೆ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು.
ಜಿಲ್ಲಾ ಬ್ರಾಹ್ಮಣ ಸಭಾ ಗೌರವಾಧ್ಯಕ್ಷ ಬೆಳ್ಳೂರು ಎಸ್. ಶಿವರಾಂ ಅವರ ನಿವಾಸಕ್ಕೆ ಭೇಟಿ ನೀಡಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಶಾಲೆಗಳಲ್ಲಿ ಅನೇಕ ವರ್ಷಗಳಿಂದ ಶಿಕ್ಷಕರ ಕೊರತೆ ಕಾಡುತ್ತಿದೆ. ಈ ಕೊರತೆಯನ್ನು ನೀಗಿಸಲು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದರು.
400 ಕೊಠಡಿಗಳ ನಿರ್ಮಾಣ:
ಶತಮಾನದಲ್ಲಿ ಕಂಡರಿಯದಷ್ಟು ಪ್ರಮಾಣದಲ್ಲಿ ಈ ಬಾರಿ ಮಳೆ ಸುರಿದಿದೆ. ಇದರಿಂದಾಗಿ ರಾಜ್ಯದಾದ್ಯಂತ ಶಾಲಾ ಕೊಠಡಿಗಳು ಕುಸಿದಿವೆ. ಶಾಲಾ ಕೊಠಡಿಗಳ ಕೊರತೆಯಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಶಾಲಾ ಕೊಠಡಿ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಕೊಠಡಿಗಳಿಗೆ ಸಂಬಂಧಿಸಿದಂತೆ ದೂರುಗಳು ಬಂದಲ್ಲಿ ಮೊದಲ ಹಂತದಲ್ಲೇ ಅವುಗಳ ದುರಸ್ಥಿಗೆ ಕ್ರಮ ಕೈಗೊಳ್ಳಲಾಗುವುದು. ಹಂತ ಹಂತವಾಗಿ ಕೊಠಡಿಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಕೊರೋನಾ ಹೆಚ್ಚಾಗಿಲ್ಲ:
ರಾಜ್ಯದಲ್ಲಿ ಕೊರೋನಾ ಎಲ್ಲೂ ಹೆಚ್ಚಾಗಿಲ್ಲಘಿ. ನಮ್ಮ ಶಾಲೆಯ ಮಕ್ಕಳಿಗೆ ಹೋಲಿಸಿದರೆ ಕೊರೋನಾ ಬಗ್ಗೆ ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ. 1.20 ಕೋಟಿ ಮಕ್ಕಳ ಪೈಕಿ 102 ಮಕ್ಕಳಿಗೆ ಮಾತ್ರ ಕೊರೋನಾ ಸೋಂಕು ಕಂಡುಬಂದಿದೆ. ಆದರೂ ನಾವು ಈ ವಿಚಾರದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದೇವೆ. ಸದಾ ಎಚ್ಚರಿಕೆಯಿಂದ ಇರುವಂತೆ ನಮ್ಮ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.
ವಸತಿ ಶಾಲೆಗಳಲ್ಲಿ ಮಾತ್ರ ಸ್ವಲ್ಪ ಮಟ್ಟಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಆದರೆ ಶಾಲಾಗಳಲ್ಲಿ ಮಾತ್ರ ಎಲ್ಲೂ ಇಲ್ಲಘಿ. ಅಲ್ಲಲ್ಲಿ ಒಂದೆಡರು ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿರಬಹುದು.