Publish Date: Mon, 04 Jul 2022 (17:04 IST)
Updated Date: Mon, 04 Jul 2022 (15:43 IST)
ನಟ ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷದ ರಾಜ್ಯ ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ತೊರೆದಿದ್ದ ಅವರು ಎಎಪಿ ಸೇರಿದ್ದರು.
ಎಎಪಿ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ ನಿರ್ದೇಶನದಂತೆ ಮುಖ್ಯಮಂತ್ರಿ ಚಂದ್ರು ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಆದೇಶ ಹೊರಡಿಸಿದ್ದಾರೆ. ಪಕ್ಷವನ್ನು ಸದೃಢವಾಗಿ ಬೆಳೆಸುವುದರಲ್ಲಿ ಚಂದ್ರು
ಮಹತ್ವದ ಪಾತ್ರ ವಹಿಸವ ದೃಢ ವಿಶ್ವಾಸವಿದೆ ಎಂದು ಹೇಳಿದ್ದಾರೆ.