Publish Date: Wed, 30 Aug 2017 (13:12 IST)
Updated Date: Wed, 30 Aug 2017 (13:16 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ನಟ ಚೇತನ್ ವಾಗ್ದಾಳಿ ನಡೆಸಿರುವುದು ಗೊಂದಲಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ.
ಲಿಂಗಾಯುತ ಧರ್ಮ ಸ್ವತಂತ್ರ ವಿಚಾರ ಸಂಕೀರಣದಲ್ಲಿ ನಟ ಚೇತನ್, ಪ್ರತ್ಯೇಕ ಲಿಂಗಾಯುತ ಧರ್ಮದ ಬಗ್ಗೆ ಹೇಳಿಕೆ ನೀಡಲಿಲ್ಲ ಎನ್ನುವ ಕಾರಣಕ್ಕೆ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಯಡಿಯೂರಪ್ಪ ವಿರುದ್ಧ ನಟ ಚೇತನ್ ವಾಗ್ದಾಳಿ ನಡೆಸುತ್ತಿರುವಂತೆ ಎದ್ದು ನಿಂತ ಬಿಎಸ್‌ವೈ ಅಭಿಮಾನಿ ಶಿವಕುಮಾರ್ ಎನ್ನುವ ವ್ಯಕ್ತಿ, ಇಲ್ಲಿ ರಾಜಕೀಯ ತರಬೇಡಿ ಎಂದು ಕೂಗಾಡಿ ಹೊರನಡೆದರು.
ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಭೆಯಲ್ಲಿ ಕೂಡಾ ಶಿವಕುಮಾರ್, ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಕೋಲಾಹಲ ಸೃಷ್ಟಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.