ವಿವಾದಾತ್ಮಕ ಟ್ವೀಟ್ ಹಿನ್ನೆಲೆಯಲ್ಲಿ ನಟ ಚೇತನ್ ಅವರನ್ನು ಬಂಧಿಸಿ, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಪ್ರಸ್ತುತ ಜಾಮೀನಿನ ಮೇಲೆ ಅವರು ಬಿಡುಗಡೆ ಹೊಂದಿದ್ದಾರೆ. ನ್ಯಾಯಾಂಗ ಬಂಧನದ ಬಳಿಕ ಅವರಿಗೆ ನೀಡಲಾಗಿದ್ದ ಗನ್ಮ್ಯಾನ್ ವಾಪಸ್ ಪಡೆಯಲಾಗಿದೆ.
ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ಶುಕ್ರವಾರ ಚೇತನ್ ಭೇಟಿ ಆಗಿದ್ದರು. ಆ ಬಳಿಕ ಮಾತನಾಡಿದ್ದ ಚೇತನ್, ಗೌರಿ ಲಂಕೇಶ್ ಹತ್ಯೆಯ ಬಳಿಕ ನನಗೆ ಗನ್ ಮ್ಯಾನ್ ನೀಡಲಾಗಿತ್ತು.
ಆದರೆ, ಈಗ ಅದನ್ನು ಹಿಂಪಡೆಯಲಾಗಿದೆ. ಮೊದಲಿನಿಂದಲೂ ನನಗೆ ಜೀವ ಬೆದರಿಕೆಯಿದೆ. ಗನ್ ಮ್ಯಾನ್ ನೀಡುವಂತೆ ಮನವಿ ಮಾಡಿದ್ದೇನೆ.
ಮನೆ ಬಳಿ ಬೀಟ್ ವ್ಯವಸ್ಥೆ ಹೆಚ್ಚಿಸುವುದಾಗಿ ಭರವಸೆ ನೀಡಿದ್ದಾರೆ. ನನ್ನ ಒಸಿಐ ರದ್ದುಪಡಿಸುವ ಬಗ್ಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ನಾನೂ ಭಾರತೀಯ, ಕನ್ನಡಿಗನೇ. ಯಾವುದೇ ರೀತಿಯಲ್ಲೂ ಒಸಿಐ ನಿಯಮ ಉಲ್ಲಂಘಿಸಿಲ್ಲ ಎಂದಿದ್ದರು.