ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಎಂದು ಎಲ್ಲೂ ಹೇಳಿಲ್ಲ: ಚೇತನ್ ಅಹಿಂಸಾ

Krishnaveni K
ಬುಧವಾರ, 20 ಮಾರ್ಚ್ 2024 (09:31 IST)
ಬೆಂಗಳೂರು: ಬೆಂಗಳೂರಿನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ ಘಟನೆ ಬಗ್ಗೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಪ್ರತಿಕ್ರಿಯಿಸಿದ್ದಾರೆ.

ಸದಾ ವಿವಾದಾತ್ಮಕ ಹೇಳಿಕೆಯಾಗುವ ಸುದ್ದಿಯಾಗುವ ವಿಚಾರವಾದಿ ಚೇತನ್ ಅಹಿಂಸಾ ಈ ಘಟನೆ ಬಗ್ಗೆ ತಮ್ಮ ಅಭಿಪ್ರಾಯವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಎಂದು ಪೊಲೀಸರು ಎಫ್ ಐಆರ್ ನಲ್ಲಿ ಉಲ್ಲೇಖಿಸಿಲ್ಲ ಎಂದಿದ್ದಾರೆ.

‘ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಬೆಂಗಳೂರಿನಲ್ಲಿ ಅಂಗಡಿ ಮಾಲಿಕನೊಬ್ಬ ಹೇಳಿಕೊಂಡಿದ್ದಾನೆ. ಎಫ್ ಐಆರ್ ನಲ್ಲಿ ಜೋರಾದ ಸಂಗೀತ ಹೊಡೆಯಲು ಕಾರಣ ಎಂದು ಹೇಳುತ್ತದೆ. ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿದ ಯಾವುದನ್ನೂ ಸೇರಿಸಲಾಗಿಲ್ಲ. ಸಮಗ್ರ ಪೊಲೀಸ್ ತನಿಖೆ ಮತ್ತು ಸರಿಯಾದ ಶಿಕ್ಷೆ ಅಗತ್ಯ. ಬಿಜೆಪಿ ಶಾಸಕರು/ಸಂಸದರು ಕೋಮುಗಲಭೆಗೆ ಪ್ರಚೋದನೆ ನೀಡುತ್ತಿರುವುದು ಕಂಡುಬಂದರೆ ಅವರನ್ನೂ ಹೊಣೆಗಾರರನ್ನಾಗಿ ಮಾಡಬೇಕು’ ಎಂದಿದ್ದಾರೆ.

ಸಹಜವಾಗಿಯೇ ಚೇತನ್ ಈ ಹೇಳಿಕೆಗೆ ನೆಟ್ಟಿಗರಿಂದ ಆಕ್ರೋಸ ವ್ಯಕ್ತವಾಗಿದೆ. ಸರಿಯಾಗಿ ವಿಷಯ ತಿಳಿದುಕೊಂಡು ಮಾತನಾಡಿ. ಈಗಾಗಲೇ ಆ ವ್ಯಕ್ತಿ ಮೇಲೆ ಹಲ್ಲೆ ನಡೆಸಲಾಗಿದೆ. ಅದು ಹನುಮಾನ್ ಚಾಲೀಸ ಹಾಕಿದ್ದಕ್ಕೆ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments