Publish Date: Tue, 24 Sep 2019 (15:46 IST)
Updated Date: Tue, 24 Sep 2019 (15:49 IST)
ಸ್ಯಾಂಡಲ್ ವುಡ ನಟ ಧ್ರುವ ಸರ್ಜಾರಿದ್ದ ಕಾರು ಅಪಘಾತಕ್ಕೆ ಈಡಾಗಿರೋ ಘಟನೆ ನಡೆದಿದೆ.
ಬಳ್ಳಾರಿಯಲ್ಲಿ ಪೊಗರು ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಅದರಲ್ಲಿ ಭಾಗಿಯಾಗಿರೋ ನಟ ಧ್ರುವ ಸರ್ಜಾ ಬಳ್ಳಾರಿಯಿಂದ ಬೆಂಗಳೂರಿಗೆ ಬರುತ್ತಿದ್ದರು.
ಮಾರ್ಗ ನಡುವೆ ಧ್ರುವ ಸರ್ಜಾರಿದ್ದ ಕಾರು ಅಪಘಾತಕ್ಕೆ ಈಡಾಗಿದ್ದು, ಕಾರಿನ ಹಿಂಭಾಗ ಜಖಂಗೊಂಡಿದೆ.
ಯಾವುದೇ ಜೀವಹಾನಿ ಸಂಭವಿಸಿಲ್ಲ. ಕಾರಿನಲ್ಲಿದ್ದವರು ಸಣ್ಣ ಗಾಯಗಳೊಂದಿಗೆ ಪಾರಾಗಿದ್ದಾರೆ.