ಬದುಕಿನ ಮೇಲೆ ನಂಬಿಕೆಯೇ ಹೋಯ್ತು ಎಂದು ನಟ ಜಗ್ಗೇಶ್ ಪರಿತಪಿಸಿದ್ದು ಯಾಕಾಗಿ ಗೊತ್ತಾ?!

Webdunia
ಸೋಮವಾರ, 12 ನವೆಂಬರ್ 2018 (11:42 IST)
ಬೆಂಗಳೂರು: ಕೇಂದ್ರ ಸಚಿವ ಅನಂತ ಕುಮಾರ್ ನಿಧನಕ್ಕೆ ಸ್ಯಾಂಡಲ್ ವುಡ್ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಅವರಲ್ಲಿ ನಟ, ಬಿಜೆಪಿ ನಾಯಕ ಜಗ್ಗೇಶ್ ಕೂಡಾ ಒಬ್ಬರು.

ಐದು ತಿಂಗಳ ಹಿಂದಷ್ಟೇ ಆರೋಗ್ಯವಾಗಿದ್ದವರು ಇಂದು ಕಾಲವಾದರು ಎಂದರೆ! ಸಿಕ್ಕಾಗಲೆಲ್ಲಾ ಬೇವು ಬೆಲ್ಲದ ಜನುಮ ನೀಡುತ್ತಾಳೆ ಹಾಡುತ್ತಿದ್ದರು. ಬದುಕಿನ ಮೇಲೆ ನಂಬಿಕೆಯೇ ಹೋಯ್ತು. ನಶ್ವರ ಜಗಕೆ ನಗುವೇ ಶಾಶ್ವತ! ಒಳಿತು ಮಾಡು ಮನುಷ್ಯ ಇರೋದು ಮೂರು ದಿವಸ ಎಂದು ಜಗ್ಗೇಶ್ ಟ್ವೀಟ್ ಮೂಲಕ ಆಘಾತ ವ್ಯಕ್ತಪಡಿಸಿದ್ದಾರೆ.

ಇನ್ನು ಅಗಲಿದ ನಾಯಕನ ಅಂತಿಮ ದರ್ಶನಕ್ಕೆ ನಟ, ರಾಜಕಾರಣಿ ಅಂಬರೀಷ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಆಗಮಿಸಿದ್ದಾರೆ. ಅಲ್ಲದೆ, ಕ್ರಿಕೆಟಿಗ ಅನಿಲ್ ಕುಂಬ್ಳೆ ಕೂಡಾ ಅನಂತ ಕುಮಾರ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ಅನಂತ ಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ. ಅದಾದ ಬಳಿಕ ಮಧ್ಯಾಹ್ನ 1 ಗಂಟೆಗೆ ಚಾಮರಾಜಪೇಟೆಯ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments