Webdunia - Bharat's app for daily news and videos

Install App

ನೇಹಾ ಹಂತಕ ಫಯಾಜ್ ಮಾಡಿದ ತಪ್ಪಿಗೆ ಇಡೀ ಮುಸ್ಲಿಂ ಸಮುದಾಯವನ್ನು ದೂಷಿಸಬೇಡಿ: ನಟ ಕಿಶೋರ್

Krishnaveni K
ಭಾನುವಾರ, 21 ಏಪ್ರಿಲ್ 2024 (10:28 IST)
Photo Courtesy: Instagram
ಬೆಂಗಳೂರು: ಹುಬ್ಬಳ್ಳಿಯಲ್ಲಿ ಕಾರ್ಪೋಟರೇಟರ್ ಮಗಳು ನೇಹಾಳನ್ನು ಹತ್ಯೆ ಮಾಡಿದ ಫಯಾಜ್ ಪ್ರಕರಣ ಈಗ ಎಲ್ಲರೂ ಇಡೀ ಮುಸ್ಲಿಂ ಸಮುದಾಯದ ಮೇಲೆಯೇ ಆಕ್ರೋಶಗೊಳ್ಳುವಂತೆ ಮಾಡಿದೆ. ಇದರ ಬಗ್ಗೆ ಸ್ಯಾಂಡಲ್ ವುಡ್ ನಟ ಕಿಶೋರ್ ಪ್ರತಿಕ್ರಿಯಿಸಿದ್ದಾರೆ.

ಫಯಾಜ್ ಮಾಡಿದ ತಪ್ಪಿಗೆ ಇಡೀ ಮುಸ್ಲಿಂ ಸಮುದಾಯವನ್ನೇ ದೂಷಿಸುವುದು ತಪ್ಪು ಎಂದು ಕಿಶೋರ್ ಅಭಿಪ್ರಾಯಪಟ್ಟಿದ್ದಾರೆ. ಅವರ ಈ ಪ್ರತಿಕ್ರಿಯೆ ಹಲವು ಪರ-ವಿರೋಧ ಕಾಮೆಂಟ್ ಗಳು ಬಂದಿವೆ. ನೇಹಾ ಮೇಲೆ ಆದ ಅನ್ಯಾಯ ಯಾರೂ ಕ್ಷಮಿಸುವಂತದ್ದಲ್ಲ. ಅದಕ್ಕೆ ಕಾನೂನು ಕಠಿಣ ಕ್ರಮ ಕೈಗೊಳ್ಳಲೇಬೇಕು. ಆದರೆ ಫಯಾಜ್ ಮಾಡಿದ ತಪ್ಪಿಗೆ ಧರ್ಮದವರೇ ತಪ್ಪು ಎಂದು ಹೇಳಲಾಗದು ಎಂದಿದ್ದಾರೆ.

‘ಒಬ್ಬ ವ್ಯಕ್ತಿಯ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದು ಎಷ್ಟು ಸರಿ? ದಿನಕ್ಕೆ 78 ಕೊಲೆಗಳಾಗುವ, ಮಹಿಳೆಯರ ವಿರುದ್ಧ ದಿನಕ್ಕೆ 1224 ಅಪರಾಧಗಳಾಗುವ ನಾಡಿನಲ್ಲಿ ಎಷ್ಟು ಹಿಂದೂ, ಎಷ್ಟು ಕ್ರೈಸ್ತ ಅಪರಾಧಿಗಳು? ಹಾಗೆಂದರೆ ಆ ಧರ್ಮದವರೆಲ್ಲರೂ ಅಪರಾಧಿಗಳೇ? ಹಾಗೆ ನೋಡಿದರೆ ಎಷ್ಟು ಅಂತರ್ಧರ್ಮೀಯ ಜೋಡಿಗಳು ಅನ್ಯೋನ್ಯವಾಗಿ ಬಾಳುತ್ತಿಲ್ಲ? ಅದಕ್ಕೆ ಆ ಧರ್ಮಗಳೂ, ಅದರ ಜನರೂ ಜವಾಬ್ಧಾರಿಯೇ? ಹೇಗೆ? ಅಪರಾಧಿಗೆ ನ್ಯಾಯ ಕೊಡಿಸಲು ಶ್ರಮಿಸುವುದನ್ನು  ವಿರೋಧ ಪಕ್ಷವಾಗಲೀ ಯಾರಾಗಲೀ ಮಾಡಿದರೆ ಒಪ್ಪಿಕೊಳ್ಳಬೇಕು. ಅದು ಅವರ ಕರ್ತವ್ಯ. ಆದರೆ ಒಡೆದಾಳುವ ಈ ಧರ್ಮಾಂಧ ಜನ ನೇಹಾ ಸಾವನ್ನು ಕೋಮು ಬಣ್ಣ ಬಳಿದು ಜನರಲ್ಲಿ ಧ್ವೇಷ ಹೆಚ್ಚಿಸಿ ರಾಜಕೀಯ ಉದ್ದೇಶಕ್ಕೆ ಬಳಸುವುದು ಕೊಲೆಯಷ್ಟೇ ಘೋರ ಅಪರಾಧ ಎಂದು ಕಿಶೋರ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments