Publish Date: Thu, 22 Feb 2018 (07:18 IST)
Updated Date: Thu, 22 Feb 2018 (07:21 IST)
ಬೆಂಗಳೂರು : ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಿನಿಮಾ ತಾರೆಯರು ಕೂಡ ರಾಜಕೀಯ ಕಣಕ್ಕಿಳಿಯುತ್ತಿದ್ದು, ಇದೀಗ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಟ ಎಸ್. ಮಹೇಂದರ್ ಅವರು ಕಾಂಗ್ರೆಸ್ ತೊರೆದು ಅಧಿಕೃತವಾಗಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.
ಬುಧವಾರ ನಗರದ ಪಕ್ಷದ ಕಚೇರಿ ಜೆಪಿಭವನದಲ್ಲಿ ಜೆಡಿಎಸ್ ಪಕ್ಷದ ಬಾವುಟ ನೀಡುವುದರ ಮೂಲಕ ಸ್ವಾಗತಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ,’ ಸಿನಿಮಾ ವಿತರಕರಾಗಿದ್ದ ಸಮಯದಿಂದಲೂ ಮಹೇಂದರ್ ಪರಿಚಯ ಇದೆ. ಅವರ ಹಲವು ಸಿನಿಮಾಗಳಿಗೆ ವಿತರಕನಾಗಿ ಕೆಲಸ ಮಾಡಿದ್ದೇನೆ. ಇದೀಗ ಕಾಂಗ್ರೆಸ್ ತೊರೆದು ನಾನಾ ಕಾರಣಗಳಿಂದಾಗಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ. ಅವರ ಸೇವೆಯನ್ನು ಪಕ್ಷವು ಪೂರ್ತಿಯಾಗಿ ಸದ್ಬಳಕೆ ಮಾಡಿಕೊಳ್ಳಲಿದೆ. ಪಕ್ಷಕ್ಕೆ ಮಹೇಂದರ್ ಅವರು ಯಾವುದೇ ಬೇಡಿಕೆ ಇಟ್ಟು ಬಂದಿಲ್ಲ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಸದುದ್ದೇಶದಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಆಗಮಿಸಿದ್ದಾರೆ’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ