Publish Date: Tue, 20 Mar 2018 (07:20 IST)
Updated Date: Tue, 20 Mar 2018 (07:24 IST)
ಬೆಂಗಳೂರು : ಬಹುಭಾಷಾ ನಟ ಪ್ರಕಾಶ್ ರೈ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರಕಾಶ್ ರೈ ಅವರು ಕಾಂಗ್ರೆಸ್ ಪಕ್ಷದ ಶಾಲಿನ ಹಾಗೇ ಇರುವ ಕೇಸರಿ, ಬಿಳಿ, ಹಸಿರು ಬಣ್ಣವನ್ನು ಹೊಂದಿರುವ ಶಾಲನ್ನು ಧರಿಸಿ ನಾಯಕನೊಬ್ಬನ ಕೈ ಕುಲುತ್ತಿರುವ ಫೋಟೋ ಈಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು, ಇದರಿಂದ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ ಎಂಬ ಗಾಳಿ ಸುದ್ದಿ ಹರಡಿದೆ. ಆದರೆ ಈ ಸುದ್ದಿ ಕೇಳಿ ಅವರ ಮ್ಯಾನೇಜರ್ ರಾಜುಬ್ ಅವರು .’ಪ್ರಕಾಶ್ ರೈ ಅವರು ಕಾಂಗ್ರೆಸ್ ಪಕ್ಷವನ್ನು ಸೇರಿಲ್ಲ. ವೈರಲ್ ಆಗಿರೋ ಫೋಟೋ ಸಿನಿಮಾದ ಚಿತ್ರೀಕರಣದ ಸಂದರ್ಭದ ಫೋಟೋ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ