Publish Date: Wed, 21 Dec 2022 (15:34 IST)
Updated Date: Wed, 21 Dec 2022 (15:40 IST)
ಆಂಧ್ರಪ್ರದೇಶದ ಕುಪ್ಪಂ ವಿಧಾನಸಭಾ ಕ್ಷೇತ್ರದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ವಿರುದ್ಧ ನಟ ವಿಶಾಲ್ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇದೀಗ ಚಂದ್ರಬಾಬು ನಾಯ್ಡು ವಿರುದ್ಧ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ನಟ ವಿಶಾಲ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಜನರ ಸೇವೆ ಮಾಡಲು ರಾಜಕೀಯಕ್ಕೆ ಬರುವ ಅಗತ್ಯವಿಲ್ಲ, ಸಾರ್ವಜನಿಕರ ಸೇವೆ ಮಾಡುವವರೆಲ್ಲ ರಾಜಕಾರಣಿಗಳೇ? ಎಂದು ಪ್ರಶ್ನಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರಿಗಿಂತಲೂ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರನ್ನು ನಾನು ಹೆಚ್ಚು ಇಷ್ಟಪಡುತ್ತೇನೆ ಎಂದು ವಿಶಾಲ್ ಹೇಳಿಕೊಂಡಿದ್ದಾರೆ.