Webdunia - Bharat's app for daily news and videos

Install App

ರಾಜಕೀಯದಲ್ಲಿ ರಮ್ಯಾ ಎಳಸು: ಮಾಜಿ ಸಚಿವ ರೇಣುಕಾಚಾರ್ಯ

Webdunia
ಶನಿವಾರ, 27 ಆಗಸ್ಟ್ 2016 (16:45 IST)
ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಪಾಕಿಸ್ತಾನ ಪರವಾಗಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ರೇಣುಕಾಚಾರ್ಯ, ರಾಜಕೀಯದಲ್ಲಿ ನಟಿ ರಮ್ಯಾ ಇನ್ನೂ ಎಳಸು ಎಂದು ಲೇವಡಿ ಮಾಡಿದ್ದಾರೆ. 
 
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸ್ವಾಭಿಮಾನವಿದ್ದರೇ, ಪಾಕಿಸ್ತಾನದ ಪರ ಹೇಳಿಕೆ ನೀಡಿರುವ ನಟಿ ರಮ್ಯಾ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.
 
ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿರುವ ಮಾಜಿ ಸಂಸದೆ ಹಾಗೂ ನಟಿ ರಮ್ಯಾ, ಪ್ರಚಾರಕ್ಕಾಗಿ ಪಾಕಿಸ್ತಾನದ ಪರವಾಗಿ ಹೇಳಿಕೆ ನೀಡುತ್ತಿದ್ದಾರೆ. ಅವರು ರಾಜಕೀಯದಲ್ಲಿ ಇನ್ನೂ ಮಗುವಾಗಿದ್ದಾರೆ ಎಂದು ಹೇಳಿದರು.

ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಸ್ಥಾಪಿಸುತ್ತಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಮಾಜಿ ಸಚಿವ ರೇಣುಕಾಚಾರ್ಯ ಜಾರಿಕೊಂಡರು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments