ಬೆಂಗಳೂರು: ಮನೆಗೆಲಸದಾಕೆ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ನೀಡಿದ್ದು ನಟಿ ರಮ್ಯಾ ಸಂತಸ ವ್ಯಕ್ತಪಡಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಮೇಲೆ ಹಲವು ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪವಿತ್ತು. ಈ ಪೈಕಿ ಸದ್ಯಕ್ಕೆ ನಾಲ್ಕು ಪ್ರಕರಣಗಳು ಪ್ರಜ್ವಲ್ ಮೇಲಿದೆ. ಇವುಗಳಲ್ಲಿ ಒಂದು ಪ್ರಕರಣದ ತೀರ್ಪು ಇಂದು ಪ್ರಕಟವಾಗಿದೆ. ನಾಳೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.
ಇಂದು ಪ್ರಜ್ವಲ್ ದೋಷಿ ಎಂದು ಕೋರ್ಟ್ ತೀರ್ಪು ನೀಡುತ್ತಿದ್ದಂತೇ ನಟಿ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಜ್ವಲ್ ಸುದ್ದಿಯನ್ನು ಪೋಸ್ಟ್ ಮಾಡಿರುವ ರಮ್ಯಾ ಎಲ್ಲಾ ಮಹಿಳೆಯರಿಗೂ ನ್ಯಾಯ ಸಿಕ್ಕಂತಾಗಿದೆ ಎಂದು ಬರೆದುಕೊಂಡಿದ್ದಾರೆ.
ಪ್ರಜ್ವಲ್ ಪ್ರಕರಣ ಬಯಲಾದಾಗಲೂ ನಟಿ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಕಿಡಿ ಕಾರಿದ್ದರು. ಇಂತಹವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದಿದ್ದರು. ಇದೀಗ ತೀರ್ಪು ಪ್ರಕಟವಾದ ಬೆನ್ನಲ್ಲೇ ಸಂತಸ ಹಂಚಿಕೊಂಡಿದ್ದಾರೆ.