ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿರುವ ಪ್ರಕರಣದ ಆರೋಪಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಆರೋಪಿ ಸಿಎಂ ಆಪ್ತ ಕೆ.ಮರಿಗೌಡ ಮೈಸೂರು ನಜರ್‌ಬಾದ್ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.
ತಹಶೀಲ್ದಾರ್ ವರ್ಗಾವಣೆಗೆ ಸಂಬಂಧಿಸಿದಂತೆ ಸಿಎಂ ಆಪ್ತ ಕೆ.ಮರಿಗೌಡ ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ್ದರು.
ಈ ಕುರಿತು ಜಿಲ್ಲಾಧಿಕಾರಿಯಾದ ಸಿ.ಶಿಖಾ ಅವರು ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಕಳೆದ ಒಂದು ತಿಂಗಳಿಂದ ಸಿಎಂ ಆಪ್ತ ಕೆ.ಮರಿಗೌಡ ತಲೆ ಮರೆಸಿಕೊಂಡಿದ್ದರು.
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ಸಿಎಂ ಆಪ್ತ ಕೆ.ಮರಿಗೌಡ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ, ನ್ಯಾಯಮೂರ್ತಿಗಳಾದ ಆನಂದ್ ಬೈರಾರೆಡ್ಡಿ ಅವರು ಜಾಮೀನು ಅರ್ಜಿವನ್ನು ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಸಿಎಂ ಆಪ್ತ ಮರಿಗೌಡ ತಮ್ಮ ವಕೀಲರೊಂದಿಗೆ ನಜರ್‌ಬಾದ್ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.