ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಅಪಹರಣದಲ್ಲಿ ಜೈಲು ಸೇರಿರುವ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ.
ನಗರದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಇಂದು ಮಧ್ಯಂತರ ನಿರೀಕ್ಷಣಾ ಜಾಮೀನು ಕೋರಿ ಹೆಚ್. ಡಿ. ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು.
ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನ್ಯಾಯಾಧೀಶರು, ಸುದೀರ್ಘವಾದ ವಾದ ಪ್ರತಿವಾದ ಆಲಿಸಿ ಹೆಚ್ಚಿನ ವಿಚಾರಣೆಗಾಗಿ ಮೇ 13ಕ್ಕೆ ಮುಂದೂಡಿದೆ.
ಜಾಮೀನು ಸಿಗುವ ನಂಬಿಕೆಯಲ್ಲಿದ್ದ ಮಾಜಿ ಸಚಿವ ರೇವಣ್ಣಗೆ ಬಾರಿ ನಿರೀಕ್ಷೆಯಾಗಿದೆ. ಈ ಮೂಲಕ ಮುಂದಿನ ವಾರದವರೆಗೆ ರೇವಣ್ಣ ಅವರು ಜೈಲಿನಲ್ಲಿ ಇರಬೇಕಾಗಿದೆ.