Select Your Language

Notifications

webdunia
webdunia
webdunia
webdunia

ಅಧಿವೇಶನ ಮುಂದೂಡಿಕೆ, ವಿದ್ಯುತ್ ದರ ಏರಿಕೆ : ಕುಮಾರಸ್ವಾಮಿ

ಅಧಿವೇಶನ ಮುಂದೂಡಿಕೆ, ವಿದ್ಯುತ್ ದರ ಏರಿಕೆ : ಕುಮಾರಸ್ವಾಮಿ
ಬೆಂಗಳೂರು , ಭಾನುವಾರ, 25 ಸೆಪ್ಟಂಬರ್ 2022 (12:35 IST)
ಬೆಂಗಳೂರು : ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್ ದರ ಏರಿಕೆ ಆಗಿದೆ. ಏನೀ ಹುನ್ನಾರ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಪ್ರಶ್ನೆ ಮಾಡಿದರು.
 
ಈ ಕುರಿತು ಟ್ವೀಟ್ ಮಾಡಿರುವ ಅವರು, ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರ್ಕಾರ, ಕರೆಂಟ್ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ. ಪ್ರತಿ ಯೂನಿಟ್ಗೆ 24 ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ ಮತ್ತು ಖಂಡನೀಯ ಎಂದರು.

ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿದ್ಯುತ್ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನು ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ ಎಂದು ಕಿಡಿಕಾರಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕೆಂಪಣ್ಣ ವಿರುದ್ದ ಕ್ರಮ ತಗೊಳ್ಳಿ : ಸಿದ್ದರಾಮಯ್ಯ