Publish Date: Tue, 05 Apr 2022 (17:43 IST)
Updated Date: Tue, 05 Apr 2022 (17:45 IST)
ಪಾಕಿಸ್ತಾನದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. ಪಾಕ್ ಸುಪ್ರೀಂಕೋರ್ಟ್‍ನಲ್ಲಿ ಪ್ರಧಾನಿ ಇಮ್ರಾನ್ ಖಾನ್‍ಗೆ ಹಿನ್ನಡೆ ಆಗಿದೆ. ಚುನಾವಣೆ ಅತ್ಯಗತ್ಯ, ಆದ್ರೇ ಅದು ಅವಿಶ್ವಾಸ ನಿಲುವಳಿ ಮೇಲಿನ ಮತದಾನದಿಂದ ನಿರ್ಧಾರವಾಗಲಿ ಎಂದು ಪಾಕಿಸ್ತಾನ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.ಈ ಬೆನ್ನಲ್ಲೇ ಪಾಕಿಸ್ತಾನ ಸುಪ್ರೀಂಕೋರ್ಟ್‍ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್ ಹೆಸರನ್ನು ಹಂಗಾಮಿ ಪ್ರಧಾನಿ ಹುದ್ದೆಗೆ ಇಮ್ರಾನ್ ಖಾನ್ ಪ್ರಸ್ತಾಪಿಸಿದ್ದಾರೆ. ಹೊಸ ಹಂಗಾಮಿ ಪ್ರಧಾನಿ ಅಧಿಕಾರ ಸ್ವೀಕರಿಸುವವರೆಗೂ ಇಮ್ರಾನ್ ಖಾನ್ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ. ಈ ಮಧ್ಯೆ, ಪಾಕ್ ರಾಜಕೀಯದಲ್ಲಿ ವಿದೇಶಿ ಹಸ್ತಕ್ಷೇಪವಿಲ್ಲ. ಯಾವ ದೇಶವೂ ನಮ್ಮ ದೇಶದ ಆಂತರಿಕ ವಿಚಾರದಲ್ಲಿ ಮೂಗು ತೂರಿಸಿಲ್ಲ ಅಂತ ಗುಪ್ತಚರ ಪಡೆ ಸ್ಪಷ್ಟಪಡಿಸಿದೆ