ನ್ಯಾಯವಾದಿಗಳು ಹಾಗೂ ಪೊಲೀಸರ ನಡುವೆ ಮಾರಾಮಾರಿ ನಡೆದು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಉಭಯ ಗುಂಪುಗಳ ನಡುವಿನ ಗಲಾಟೆ ಸಂದರ್ಭದಲ್ಲಿ ಹತ್ತಾರು ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ. ವಕೀಲರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೊಲೀಸರ ಕ್ರಮ ಖಂಡಿಸಿ ವಕೀಲರು ಪ್ರತಿಭಟನೆಗೆ ಮುಂದಾಗಿದ್ದಾರೆ. ತೀಸ್ ಹಜಾರಿ ನ್ಯಾಯಾಲಯದ ಆವರಣದಲ್ಲಿ ಈ ಘಟನೆ ನಡೆದಿದೆ.
ವಕೀಲರು ಹಾಗೂ ಪೊಲೀಸರ ನಡುವಿನ ಜಗಳಕ್ಕೆ ನಿಖರ ಕಾರಣ ಗೊತ್ತಾಗಿಲ್ಲ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!