Daily Horoscope
✕

ಅಫ್ತಾಬ್ ಪೊಲೀಸ್ ಕಸ್ಟಡಿ 4 ದಿನ ವಿಸ್ತರಣೆ

Webdunia
ಮಂಗಳವಾರ, 22 ನವೆಂಬರ್ 2022 (18:02 IST)
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಶ್ರದ್ಧಾ ವಾಕರ್ ಕೊಲೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನ ಪೊಲೀಸ್ ಕಸ್ಟಡಿಯನ್ನು ಇನ್ನೂ 4 ದಿನಗಳವರೆಗೆ ವಿಸ್ತರಿಸಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ದೆಹಲಿಯ ಸಾಕೇತ್ ನ್ಯಾಯಾಲಯವು ಅಫ್ತಾಬ್ ಪೂನಾವಾಲಾನ ಪೊಲೀಸ್ ಕಸ್ಟಡಿಯನ್ನು ವಿಸ್ತರಿಸಿದೆ. ಮೂಲಗಳ ಪ್ರಕಾರ, ಅಫ್ತಾಬ್ ಪೂನಾವಾಲಾ ಶ್ರದ್ಧಾಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ನಾನು ಕೋಪದ ಭರದಲ್ಲಿ ಈ ಕೊಲೆ ಮಾಡಿದೆ ಎಂದು ಹೇಳಿದ್ದಾನೆ. ಶ್ರದ್ಧಾ ವಾಲ್ಕರ್ ಅವರನ್ನು 28 ವರ್ಷದ ಅಫ್ತಾಬ್ ಪೂನಾವಾಲಾ ಕೊಲೆ ಮಾಡಿದ್ದು, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೇಹದ ಭಾಗಗಳನ್ನು ಮಧ್ಯರಾತ್ರಿಯ ನಂತರ ನಗರದಾದ್ಯಂತ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶ್ರದ್ಧಾಳನ್ನು ಕೊಂದು, ಕತ್ತರಿಸಿದ ಆರೋಪಿ ಅಫ್ತಾಬ್ ಪೂನಾವಾಲಾನ ಪಾಲಿಗ್ರಾಫ್ ಪರೀಕ್ಷೆಯನ್ನು ದೆಹಲಿ ಪೊಲೀಸರು ಇಂದು ನಡೆಸುವ ಸಾಧ್ಯತೆಯಿದೆ. ಕೊಲೆಯ ಆಯುಧ, ಶ್ರದ್ಧಾಳ ತಲೆಬುರುಡೆ, ಬಟ್ಟೆ ಮತ್ತು ಫೋನ್ ಅನ್ನು ವಶಪಡಿಸಿಕೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ. ಇಲ್ಲಿಯವರೆಗೆ ಪೊಲೀಸರು ಕೆಲವು ಮೂಳೆಗಳನ್ನು ಮಾತ್ರ ವಶಪಡಿಸಿಕೊಂಡಿದ್ದಾರೆ. ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಅಫ್ತಾಬ್‌ನನ್ನು ಮಂಗಳವಾರ ಮತ್ತೆ ವೀಡಿಯೊಗ್ರಫಿ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments