Select Your Language

Notifications

webdunia
webdunia
webdunia
webdunia

15 ದಿನಗಳ ಎಸ್‌ಐಟಿ ಗ್ರೀಲ್‌ ಬಳಿಕ ಶಿವಮೊಗ್ಗದ ಜೈಲಿಗೆ ಬುರುಡೆ ಚಿನ್ನಯ್ಯ ಶಿಫ್ಟ್‌

Dharmasthala Burude case, Accused Chinnaiah, Mahesh Shetty Timarodi Gang

Sampriya

ಮಂಗಳೂರು , ಶನಿವಾರ, 6 ಸೆಪ್ಟಂಬರ್ 2025 (18:03 IST)
ಮಂಗಳೂರು:  ಧರ್ಮಸ್ಥಳ ಗ್ರಾಮದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ಆರೋಪಿ ಸಿ.ಎನ್‌. ಚಿನ್ನಯ್ಯನನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ.

ಬುರುಡೆ ಚಿನ್ನಯ್ಯನ 15 ದಿನಗಳ ಎಸ್‌ಐಟಿ ಕಸ್ಟಡಿ ಅವಧಿ ಇಂದಿಗೆ ಮುಗಿದ ಹಿನ್ನೆಲೆಯಲ್ಲಿ ಆತನನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ವಿಜಯೇಂದ್ರ ಎಚ್.ಟಿ. ಮುಂದೆ ಹಾಜರುಪಡಿಸಿದರು. 

ಈ ವೇಳೆ ಎಸ್ಐಟಿ ಪರವಾಗಿ‌ ಸರಕಾರಿ ಅಭಿಯೋಜಕರು ವಾದ ಮಂಡಿಸಿದರು. ಚಿನ್ನಯ್ಯನ‌ ಪರವಾಗಿ‌ ಸರಕಾರದ ಕಾನೂನು ಸೇವಾ ಪ್ರಾಧಿಕಾರದಿಂದ ನೇಮಿಸಿದ ಮಂಗಳೂರಿನ ಮೂವರು ನ್ಯಾಯವಾದಿಗಳು ಹಾಜರಾದರು.

ಚಿನ್ನಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಸಾಕ್ಷ್ಯಗಳ ಸಂಗ್ರಹ ಹಿನ್ನೆಲೆಯಲ್ಲಿ ಹಾಗೂ ಆತನ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ಮತ್ತೆ ಕಸ್ಟಡಿಗೆ ಕೇಳಿಲ್ಲ. ಈ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಧರ್ಮಸ್ಥಳ ಪ್ರಕರಣದ ಬುರುಡೆ ಚಿನ್ನಯ್ಯ ಜೈಲುಪಾಲಾಗಿದ್ದು, ಭದ್ರತಾ ದೃಷ್ಟಿಯಿಂದ ಆತನನ್ನು ಶಿವಮೊಗ್ಗ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಗರ್ಭ ಶ್ರೀಮಂತ ಪ್ರಜ್ವಲ್ ರೇವಣ್ಣ ಜೈಲಲ್ಲಿ ಏನಾಗಿದ್ದಾರೆ ಗೊತ್ತಾ