ರಾಜ್ಯಾದ್ಯಂತ ಕಾವೇರಿ ಹೋರಾಟ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಸಂಜೆ ಆರು ಗಂಟೆಗೆ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಸಭೆಯ ನಂತರ ಅಂತಿಮ ತೀರ್ಮಾನ ಪ್ರಕಟಿಸುವುದಾಗಿ ಹೇಳಿದ್ದಾರೆ.
ಸರ್ವಪಕ್ಷಗಳ ಸಭೆ ಕುರಿತಂತೆ ಇಂದು ಪೂರ್ವಭಾವಿ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಸಭೆಯಲ್ಲಿ ನಡೆದ ವಿವರಗಳ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಸರ್ವಪಕ್ಷಗಳ ಸಭೆಯ ನಂತರ ಮಹತ್ವದ ತೀರ್ಮಾನ ತಿಳಿಸುವುದಾಗಿ ಹೇಳಿದ್ದಾರೆ.
ಕಾವೇರಿ ಭಾಗದ ಸಚಿವರು , ಕೇಂದ್ರ ಸಚಿವರು ಮತ್ತು ಸಂಸದರು ಹಾಗೂ ವಿವಿಧ ಪಕ್ಷಗಳ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಸಭೆಯ ನಂತರ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶದ ಪುನರ್‌ಪರಿಶೀಲನಾ ಅರ್ಜಿ ಸಲ್ಲಿಸಬೇಕೇ ಅಥವಾ ಬೇರೆ ದಾರಿಗಳಿವೆಯೇ ಎನ್ನುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಕಾನೂನು ತಜ್ಞರ ಜೊತೆ ಚರ್ಚಿಸಿದ್ದು ಪರಿಹಾರ ಹುಡುಕಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ