ಜಿಲ್ಲಾ ಪ್ರವಾಸ ಮೊಟಕುಗೊಳಿಸಿ ಸಿಎಂ ಬೆಂಗಳೂರಿಗೆ ವಾಪಸ್

Webdunia
ಬುಧವಾರ, 29 ಮಾರ್ಚ್ 2023 (10:02 IST)
ಬೆಂಗಳೂರು :  ಬಿಜೆಪಿಯಲ್ಲಿ ಚುನಾವಣಾ ಚಟುವಟಿಕೆಗಳು ಚುರುಕುಗೊಂಡಿದೆ. ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಪ್ರವಾಸವನ್ನು ಮೊಟಕುಗೊಳಿಸಿ ಮಂಗಳವಾರ ತಡರಾತ್ರಿಯೇ ಬೆಂಗಳೂರಿಗೆ ವಾಪಸಾಗಿದ್ದಾರೆ.
 
ಬೊಮ್ಮಾಯಿಯವರು ನಿಗದಿತ ಕಾರ್ಯಕ್ರಮದಂತೆ ಸವದತ್ತಿ ಕಾರ್ಯಕ್ರಮದ ಬಳಿಕ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿ, ಸ್ವಕ್ಷೇತ್ರದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿತ್ತು. ಆದರೆ ರಾತ್ರಿಯೇ ಹುಬ್ಬಳ್ಳಿ ವಾಸ್ತವ್ಯವನ್ನು ರದ್ದುಗೊಳಿಸಿ ಬೆಂಗಳೂರಿಗೆ ಸಿಎಂ ವಾಪಸ್ ಆಗಿದ್ದಾರೆ. ಸಿಎಂಗೆ ನಿನ್ನೆಯೇ ಚುನಾವಣೆ ಘೋಷಣೆಯ ಸುಳಿವಿತ್ತಾ ಎಂಬ ಪ್ರಶ್ನೆ ಇದೀಗ ಮೂಡಿದೆ. 

ಸ್ವಕ್ಷೇತ್ರದ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಬೇಕಿತ್ತು. ಇದೀಗ ಕೊಪ್ಪಳ, ಹಾವೇರಿ ಜಿಲ್ಲಾ ಪ್ರವಾಸ ಮೊಟಕುಗೊಳಿಸಲಾಗಿದೆ. ಬುಧವಾರಕ್ಕೆ ನಿಗದಿಯಾಗಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳೂ ರದ್ದಾಗಿದೆ. ಸಿಎಂ, ಸಚಿವರ, ಶಾಸಕರ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವರ ಕುರ್ಚಿ ಕಾಳಗದಲ್ಲಿ ಕರ್ನಾಟಕದ ಉದ್ಯೋಗ ಆಂಧ್ರ ಪಾಲಾಗಿದೆ: ಛಲವಾದಿ ನಾರಾಯಣಸ್ವಾಮಿ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಮುಂದಿನ ಸುದ್ದಿ
Show comments