Select Your Language

Notifications

webdunia
webdunia
webdunia
webdunia

ದಸರಾ ನಂತರ ನಿಗಮ ಮಂಡಳಿಗಳ ಅಧ್ಯಕ್ಷ , ಉಪಾಧ್ಯಕ್ಷರ ನೇಮಕ

ದಸರಾ ನಂತರ ನಿಗಮ ಮಂಡಳಿಗಳ ಅಧ್ಯಕ್ಷ , ಉಪಾಧ್ಯಕ್ಷರ ನೇಮಕ
ಮೈಸೂರು , ಶುಕ್ರವಾರ, 7 ಅಕ್ಟೋಬರ್ 2016 (12:46 IST)
ನಾಡಹಬ್ಬ ದಸರಾ ನಂತರ ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ನೇಮಕ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಹಬ್ಬ ದಸರಾ ನಂತರ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ಅನುಮತಿ ಪಡೆದು ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಕಾತಿ ಪೂರ್ಣಗೊಳಿಸಲಾಗುತ್ತದೆ. ಈಗಾಗಲೇ ಈ ಕುರಿತು ಎಲ್ಲರೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದರು. 
 
ಸುಪ್ರೀಂಕೋರ್ಟ್ ಸೂಚನೆಯಂತೆ ಕಾವೇರಿ ಜಲಾನಯನ ಪ್ರದೇಶದ ವಸ್ತುಸ್ಥಿತಿ ಅಧ್ಯಯನ ಮಾಡಲು ಇಂದು ಕೇಂದ್ರದ ತಾಂತ್ರಿಕ ತಂಡ ಆಗಮಿಸಿದೆ. ನಮ್ಮ ಕಡೆಯಿಂದ ಎಲ್ಲಾ ಮಾಹಿತಿಗಳನ್ನು ನೀಡುತ್ತೇವೆ. ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡುತ್ತೇವೆ ಎಂದು ಹೇಳಿದರು.
 
ರಾಜಕೀಯಕ್ಕೆ ಡಾ.ಯತೀಂದ್ರ ಆಗಮನ......
 
ನನ್ನ ಪುತ್ರ ಡಾ.ಯತೀಂದ್ರನನ್ನು ಬಲವಂತವಾಗಿ ರಾಜಕೀಯಕ್ಕೆ ಕರೆತರುವುದಿಲ್ಲ. ರಾಕೇಶ್ ಅಕಾಲಿಕ ನಿಧನದ ನಂತರ ಯತೀಂದ್ರ ವರುಣಾ ಕ್ಷೇತ್ರವನ್ನು ನೋಡಿಕೊಳ್ಳುತ್ತಿದ್ದಾನೆ. ನಾನು ರಾಜ್ಯದ ಮುಖ್ಯಮಂತ್ರಿಯಾದ ಕಾರಣ ಸ್ವ-ಕ್ಷೇತ್ರದ ಕಡೆ ಹೆಚ್ಚು ಗಮನ ನೀಡಲು ಸಾಧ್ಯವಾಗುತ್ತಿಲ್ಲ. ಜನತೆ ಬಯಸಿದರೇ ಯತೀಂದ್ರ ರಾಜ್ಯ ರಾಜಕೀಯಕ್ಕೆ ಬರುತ್ತಾನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಜಯಲಲಿತಾ ಭೇಟಿಗೆ ಆಗಮಿಸಿದ ರಾಹುಲ್ ಗಾಂಧಿ