ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಹಾಗೂ ಪಕ್ಷದ ಮುಖಂಡರು ಸೌಜನ್ಯ ಮನೆಗೆ ಭೇಟಿ ಅವರ ತಾಯಿ ಕುಸುಮಾ ಜತೆ ಕೆಲ ಹೊತ್ತು ಮಾತುಕತೆ ನಡೆಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಪ್ರಕರಣವನ್ನು NIA ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಧರ್ಮಸ್ಥಳ ಚಲೋ ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ ವಿಜಯೇಂದ್ರ ಅವರು ಸೌಜನ್ಯ ಮನೆಗೆ ಭೇಟಿ ನೀಡಿದರು.
ಧರ್ಮಸ್ಥಳ ದೇವಸ್ಥಾನಕ್ಕೆ ಒಗ್ಗಟ್ಟು ವ್ಯಕ್ತಪಡಿಸಲು ಬಿಜೆಪಿ ಧರ್ಮಸ್ಥಳ ಚಲೋ ಬ್ಯಾನರ್ ಅಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಭಟನೆಗೆ ಚಾಲನೆ ನೀಡಿ, ಹಿಂದೂ ಧಾರ್ಮಿಕ ಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.