Publish Date: Sat, 25 Jul 2026 (21:05 IST)
Updated Date: Sat, 25 Jul 2026 (21:07 IST)
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ, ಕ್ಯಾಬಿನೆಟ್ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಅವರ ಪ್ರಸ್ತುತ ಖಾತೆಯ ಜೊತೆಗೆ ಶಿಕ್ಷಣ ಸಚಿವಾಲಯದ ಜವಾಬ್ದಾರಿಯನ್ನೂ ವಹಿಸುವಂತೆ ಭಾರತದ ರಾಷ್ಟ್ರಪತಿಗಳು ನಿರ್ದೇಶನ ನೀಡಿದ್ದಾರೆ.
ದೇಶಾದ್ಯಂತ ನಡೆದ ಪ್ರತಿಭಟನೆಗಳ ನಂತರ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ, ಶನಿವಾರ (ಜುಲೈ 25, 2026) ಪ್ರಲ್ಹಾದ್ ಜೋಶಿ ಅವರನ್ನು ನೂತನ ಕೇಂದ್ರ ಶಿಕ್ಷಣ ಸಚಿವರನ್ನಾಗಿ ನೇಮಕ ಮಾಡಲಾಯಿತು. ಈ ಮೂಲಕ ಪ್ರಹ್ಲಾದ್ ಜೋಶಿಗೆ ಬಯಸದೆ ದೊಡ್ಡ ಜವಾಬ್ದಾರಿ ಸಿಕ್ಕಿದ ಹಾಗಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ, ಕ್ಯಾಬಿನೆಟ್ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಅವರ ಪ್ರಸ್ತುತ ಖಾತೆಯ ಜೊತೆಗೆ ಶಿಕ್ಷಣ ಸಚಿವಾಲಯದ ಜವಾಬ್ದಾರಿಯನ್ನೂ ವಹಿಸುವಂತೆ ಭಾರತದ ರಾಷ್ಟ್ರಪತಿಗಳು ನಿರ್ದೇಶನ ನೀಡಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ