ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

Sampriya
ಬುಧವಾರ, 15 ಅಕ್ಟೋಬರ್ 2025 (15:26 IST)
Photo Credit X
ಹಾಸನ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದರು. ಅದರ ಬೆನ್ನಲ್ಲೇ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅದು ಹಾಸನಾಂಬೆ ದೇವಿಯ ದರ್ಶನ ಪಡೆದರು.

ಜಿಲ್ಲೆಗೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಡಳಿತ ವ್ಯವಸ್ಥೆ ಮಾಡಿದ ಶಿಷ್ಟಾಚಾರದ ವಾಹನದಲ್ಲೇ  ದೇಗುಲಕ್ಕೆ ಬಂದರು. ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ದೇಗುಲಕ್ಕೆ ಸ್ವಾಗತಿಸಿದರು. 

ಸಿದ್ದರಾಮಯ್ಯ ಅವರ ಜೊತೆ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಇದ್ದರು. ಬಳಿಕ ಜಿಲ್ಲಾಡಳಿತ ಸಿಎಂ ಅವರನ್ನು ಮಂಗಳವಾದ್ಯಗಳೊಂದಿಗೆ ದೇವಿ ದರ್ಶನಕ್ಕೆ ಕರೆದೊಯ್ಯಿತು.

ಕಳೆದ ಎರಡು ವರ್ಷಗಳಿಂದ ಸಿಎಂ ಸಿದ್ದರಾಮಯ್ಯ ದೇವಿ ದರ್ಶನ ಪಡೆಯುತ್ತಿದ್ದು, ಈ ಮೂಲಕ ಮೂರನೇ ಬಾರೀ ದೇವಿ ದರ್ಶನ ಪಡೆದುಕೊಂಡಿದ್ದಾರೆ. ದೇವಿ ದರ್ಶನ ಪಡೆದು ದರ್ಬಾರ್ ಗಣಪತಿ ಹಾಗೂ ಸಿದ್ದೇಶ್ವರಸ್ವಾಮಿ ದೇವರ ದರ್ಶನ ಪಡೆದರು.

ಇಂದು ಐತಿಹಾಸಿಕ ಹಾಸನಾಂಬಾ ದೇವಿಯ ಉತ್ಸವದಲ್ಲಿ ಪಾಲ್ಗೊಂಡು, ತಾಯಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದೆ. ಹಾಸನಾಂಬೆಯ ಆಶೀರ್ವಾದ ನಾಡಿನ ಸಮಸ್ತ ಜನರ ಮೇಲಿರಲಿ, ಎಲ್ಲರ ಮನೆಗಳಲ್ಲಿ ಸುಖ, ಶಾಂತಿ, ಸಮೃದ್ಧಿ ಚಿರಕಾಲ ನೆಲೆಸಲಿ ಎಂದು ಈ ವೇಳೆ ಪ್ರಾರ್ಥಿಸಿದೆ ಎಂದು ಎಕ್ಸ್‌ನಲ್ಲಿ ಸಿಎಂ ಬರೆದುಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments