Publish Date: Tue, 28 Apr 2026 (10:05 IST)
Updated Date: Tue, 28 Apr 2026 (10:07 IST)
ಬೆಂಗಳೂರು: ಸಿಎಂ ಬದಲಾವಣೆ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಡಿಕೆ ಶಿವಕುಮಾರ್ ಬಳಿಕ ಈಗ ಸಿಎಂ ಸಿದ್ದರಾಮಯ್ಯ ಬಣ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟಿದೆ.
ಅಸ್ಸಾಂ, ಕೇರಳ ಚುನಾವಣೆ ಬಳಿಕ ಮತ್ತೆ ರಾಜ್ಯದಲ್ಲಿ ಅಧಿಕಾರ ಹಸ್ತಾಂತರ ವಿಚಾರ ಸದ್ದು ಮಾಡುವ ಸೂಚನೆ ಸಿಕ್ಕಿದೆ. ಈಗಾಗಲೇ ಡಿಕೆ ಶಿವಕುಮಾರ್ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿ ಬಂದಿದ್ದಾರೆ.
ಇದರ ನಡುವೆ ನಿನ್ನೆ ಡಿಕೆ ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕರು ಮೇ ಎರಡನೇ ವಾರದಲ್ಲಿ ಹೈಕಮಾಂಡ್ ಸಿಹಿ ಸುದ್ದಿ ನೀಡಲಿದೆ ಎಂದು ಹೇಳಿಕೆ ನೀಡಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಇದರ ಬೆನ್ನಲ್ಲೇ ಸಿಎಂ ಬಣ ಅಲರ್ಟ್ ಆಗಿದೆ.
ಇದೀಗ ಸಿಎಂ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕರು ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರ ಭೇಟಿಗೆ ಮುಂದಾಗಿದ್ದಾರೆ. ಸತೀಶ್ ಜಾರಕಿಹೊಳಿ, ಮಹದೇವಪ್ಪ ಸೇರಿದಂತೆ ಘಟಾನುಘಟಿ ನಾಯಕರು ದೆಹಲಿಗೆ ತೆರಳಿದ್ದು ಸಿಎಂ ಬದಲಾವಣೆ ಮಾಡದಂತೆ ಒತ್ತಡ ಹೇರಲಿದ್ದಾರೆ ಎನ್ನಲಾಗಿದೆ. ಅಲ್ಲದೆ ಇತ್ತೀಚೆಗೆ ಅಲ್ಪಸಂಖ್ಯಾತ ಸಮುದಾಯದ ನಾಯಕರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಇದನ್ನು ಹಿಂಪಡೆಯುವಂತೆ ಒತ್ತಾಯಿಸಲಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಮೇ ತಿಂಗಳಿನಲ್ಲಿ ಮತ್ತೆ ರಾಜ್ಯ ರಾಜಕೀಯ ಗರಿಗೆದರುವುದು ನಿಶ್ಚಿತವಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ