ಬೆಂಗಳೂರು: ಡಿಕೆ ಶಿವಕುಮಾರ್ ಅವರ ಮನೆಯಲ್ಲಿ ಇಂದು ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ನೇರವಾಗಿ ತೆರಳಿದ್ದು ಎಲ್ಲಿಗೆ ಗೊತ್ತಾ?
ಹೈಕಮಾಂಡ್ ಅಣತಿ ಮೇರೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮತ್ತೊಂದು ಸುತ್ತಿನ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದಾರೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದು ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಸವಿದಿದ್ದಾರೆ.
ಬಳಿಕ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಅಧಿವೇಶನದಲ್ಲಿ ವಿಪಕ್ಷಗಳನ್ನು ಒಗ್ಗಟ್ಟಾಗಿ ಎದುರಿಸೋಣ ಎಂದು ತೀರ್ಮಾನಿಸಿದ್ದೇವೆ ಎಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಇದಾದ ಬಳಿಕ ಸಿಎಂ ನೇರವಾಗಿ ಹೃದಯಸ್ತಂಬನದಿಂದ ಅಗಲಿದ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಆರ್ ವಿ ದೇವರಾಜ್ ಅವರ ಅಂತಿಮ ದರ್ಶನಕ್ಕೆ ತೆರಳಿದ್ದಾರೆ. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಅವರು ಅಗಲಿಕೆಯ ದುಃಖ ಭರಿಸುವ ಶಕ್ತಿ ಕುಟುಂಬಕ್ಕೆ ನೀಡಲಿ ಎಂದು ಹಾರೈಸಿದ್ದಾರೆ.