ಗೋಮಾಂಸ ಸಂಗ್ರಹಿಸಲಾಗುತ್ತದೆ ಎನ್ನುವ ಅನುಮಾನದ ಮೇರೆಗೆ ದಲಿತ ಕುಟುಂಬದ ನಾಲ್ವರ ಮೇಲೆ ಆರೋಪಿಗಳು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.
ಗುಜರಾತ್ ರಾಜ್ಯದ ಉನಾ ಜಿಲ್ಲೆಯಲ್ಲಿ ದಲಿತ ಮೇಲೆ ನಡೆದ ಹಲ್ಲೆ ಮಾಸುವ ಮುನ್ನವೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ವರದಿಯಾಗಿದೆ.
ಕೋಮು ಸೌಹಾರ್ದ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎ.ಕೆ.ಅಶೋಕ್ ಮಾತನಾಡಿ, ದಲಿತರು ಗೋಮಾಂಸ ಸಂಗ್ರಹಿಸುತ್ತಿದ್ದುದಲ್ಲದೇ ಸೇವನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಜರಂಗದಳದ ಕಾರ್ಯಕರ್ತರು ದಲಿತ ಕುಟುಂಬದವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸರು ಏಳು ಮಂದಿ ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.