Publish Date: Thu, 25 Jan 2018 (16:25 IST)
Updated Date: Thu, 25 Jan 2018 (16:28 IST)
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇಂದಿನ ಕರ್ನಾಟಕ ಬಂದ್ ಮುಕ್ತಾಯಗೊಳ್ಳುತ್ತಿದ್ದು, ಜನ ಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಅಂಗಡಿ ಮುಂಗಟ್ಟುಗಳು, ಬಸ್ ಸಂಚಾರ ಶುರುವಾಗುತ್ತಿದೆ.
ಬೆಳಗ್ಗೆಯಿಂದ ಬಸ್ ಸಂಚಾರವಿಲ್ಲದೇ ಸಾರ್ವಜನಿಕರು ಪರದಾಡಿದ್ದರು. ಇದೀಗ ಮೆಜೆಸ್ಟಿಕ್ ನಿಂದ ಬಿಎಂಟಿಸಿ ಬಸ್ ಸಂಚಾರ ಆರಂಭವಾಗುತ್ತಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಡುತ್ತಿದ್ದಾರೆ.
ಇನ್ನು, ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿ ಚಿತ್ರಮಂದಿರಗಳೂ ಬಂದ್ ಆಗಿದ್ದವು. ಆದರೆ ಇದೀಗ ಸಂಜೆ 4.30 ರ ಪ್ರದರ್ಶನಕ್ಕೆ ಸಿದ್ಧತೆ ನಡೆಯುತ್ತಿದೆ. ಅಂತೂ ಬೆಂಗಳೂರು ಸಹಜ ಸ್ಥಿತಿಯತ್ತ ಬರುತ್ತಿರುವುದು ಸಾರ್ವಜನಿಕರಿಗೆ ನೆಮ್ಮದಿ ತಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ