Webdunia - Bharat's app for daily news and videos

Install App

ಹಲವು ದೂರುಗಳ ಬೆನ್ನಲ್ಲೇ ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

Sampriya
ಬುಧವಾರ, 25 ಜೂನ್ 2025 (15:18 IST)
Photo Credit X
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯವಾಗಿರುವ ಮುರುಡೇಶ್ವರದಲ್ಲಿ  ಅಧಿಕೃತವಾಗಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ. ಅದರಂತೆ ಇನ್ಮುಂದೆ ದೇವಸ್ಥಾನಕ್ಕೆ ಬರುವಾಗ ಭಾರತೀಯ ಸಾಂಪ್ರದಾಯಿಕ ಉಡುಪಿನಲ್ಲಿ ಬರುವಂತೆ ಸೂಚಿಸಲಾಗಿದೆ. 

ಹೊಸ ವಸ್ತ್ರ ಸಂಹಿತೆ ಪ್ರಕಾರ ಪುರುಷರು ಅಂಗಿ, ಧೋತಿ, ಪ್ಯಾಂಟ್ ಮತ್ತು ಕುರ್ತಾ ಪೈಜಾಮ, ಮಹಿಳೆಯರು ಸೀರೆ, ಸಾಲ್ವರ್ -ಚೂಡಿದಾರ ಧರಿಸಿ ದೇವರ ದರ್ಶನ ಪಡೆಯಬಹುದು ಎಂದು ತಿಳಿಸಲಾಗಿದೆ.

ಇನ್ಮುಂದೆ ದೇವಸ್ಥಾನಕ್ಕೆ ಪಾಶ್ಚಿಮಾತ್ಯ ಶೈಲಿಯ ಅಥವಾ ಕ್ಯಾಶುಯಲ್ ಉಡುಪುಗಳಿಗೆ ಅನುಮತಿ ನಿರಾಕರಿಸಲಾಗಿದೆ. ಹೊಸ ನಿಯಮವನ್ನು ಭಕ್ತರಿಗೆ ಗೆ ತಿಳಿಸಲು ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಸೂಚನಾ ಫಲಕವನ್ನು ಅಳವಡಿಸಲಾಗಿದೆ.

ದೇವಸ್ಥಾನದ ಪಾವಿತ್ರ್ಯತೆ ಕಾಪಾಡಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಮುರುಡೇಶ್ವರ ದೇವಾಲಯಕ್ಕೆ ಭೇಟಿ ನೀಡುವ ಕೆಲವು ಭಕ್ತರು ಅನುಚಿತ ಮತ್ತು ಬೇಕಾಬಿಟ್ಟಿ ವಸ್ತ್ರ ಧರಿಸಿ ಪ್ರವೇಶಿಸುತ್ತಿದ್ದರು ಎಂಬ ಆಕ್ಷೇಪಗಳು ಕೇಳಿಬಂದಿದ್ದವು.

ಈ ಕುರಿತು ಸ್ಥಳೀಯ ಭಕ್ತರು ಮತ್ತು ಹಿಂದೂ ಪರ ಸಂಘಟನೆಗಳು ದೇವಾಲಯದ ಆಡಳಿತ ಮಂಡಳಿಗೆ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದವು. ಈ ಮನವಿಗಳನ್ನು ಪರಿಗಣಿಸಿ, ಆಡಳಿತ ಮಂಡಳಿಯು ಈಗ ಕಡ್ಡಾಯ ವಸ್ತ್ರ ಸಂಹಿತೆ ಜಾರಿಗೊಳಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಭೂಕುಸಿತವಾಗಿದ್ದ ವಯನಾಡಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ

CBSE ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೊಸ ಪದ್ಧತಿ: ಮುಂದಿನ ವರ್ಷದಿಂದಲೇ ಜಾರಿಗೆ

ಸಂವಿಧಾನಕ್ಕೆ ಏನಾದ್ರೂ ಅಪಾಯವಿದ್ರೆ ಅದು ನಿಮ್ಮಿಂದಲೇ ಮಿಸ್ಟರ್ ಮೋದಿ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments