Webdunia - Bharat's app for daily news and videos

Install App

ಪೆಟ್ರೋಲ್, ಡೀಸೆಲ್ ಆಯ್ತು, ಈಗ ಬೆಂಗಳೂರಿನಲ್ಲಿ ನೀರಿನ ಬೆಲೆ ಏರಿಕೆಗೂ ರೆಡಿಯಾಗಿ

Krishnaveni K
ಸೋಮವಾರ, 17 ಜೂನ್ 2024 (10:01 IST)
ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಬೆಂಗಳೂರಿಗರಿಗೆ ಈಗ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ನೀರಿನ ಬೆಲೆ ಏರಿಕೆಗೆ ಸರ್ಕಾರ ಸದ್ದಿಲ್ಲದೇ ತಯಾರಿ ನಡೆಸಿದೆ.

ಕಳೆದ 10 ವರ್ಷಗಳಿಂದ ನೀರಿನ ದರ ಪರಿಷ್ಕರಣೆಯಾಗಿಲ್ಲ. ಇದೀಗ ಬೆಂಗಳೂರಿನಲ್ಲಿ ಜಲಮಂಡಳಿಯ ನೀರಿನ ದರ ಏರಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಜಲಮಂಡಳಿ ಈಗಾಗಲೇ ದರ ಏರಿಕೆಗೆ ಸರ್ಕಾರದ ಮುಂದೆ ಪ್ರಸ್ತಾವನೆ ಮುಂದಿಟ್ಟಿದೆ. ಸದ್ಯದಲ್ಲೇ ದರ ಏರಿಕೆಯಾಗುವ ಎಲ್ಲಾ ಸಾಧ್ಯತೆಯಿದೆ.

ಅಧಿಕಾರಕ್ಕೆ ಬಂದ ಬೆನ್ನಲ್ಲೇ ಸರ್ಕಾರ ನೀರಿನ ದರ ಏರಿಕೆ ಬಗ್ಗೆ ಸುಳಿವು ನೀಡಿತ್ತು. ಆದರೆ ಅದಾದ ಬಳಿಕ ಬೆಂಗಳೂರಿನಲ್ಲಿ ನೀರಿನ ಅಭಾವ ಎದುರಾಗಿತ್ತು. ಬಳಿಕ ಲೋಕಸಭೆ ಚುನಾವಣೆ ಎದುರಾಗಿತ್ತು. ಹೀಗಾಗಿ ರಾಜ್ಯ ಸರ್ಕಾರ ದರ ಏರಿಕೆ ಮಾಡುವ ಗೋಜಿಗೆ ಹೋಗಿರಲಿಲ್ಲ.

ಆದರೆ ಈಗ ಮಳೆಯಾಗಿದ್ದು, ಚುನಾವಣೆಯೂ ಮುಗಿದಿದೆ. ಇತ್ತ ಗ್ಯಾರಂಟಿ ಯೋಜನೆಗಳಿಗೆ ಹಣ ಕ್ರೋಢೀಕರಿಸಲು ಸರ್ಕಾರ ಹೆಣಗಾಡುತ್ತಿದೆ. ಇದರ ನಡುವೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನರಿಗೆ ಬಿಸಿ ಮುಟ್ಟಿಸಿದೆ. ಇದರ ನಡುವೆ ಈಗ ನೀರಿನ ದರವೂ ಏರಿಕೆಯಾದರೆ ಜನರಿಗೆ ಗಾಯದ ಮೇಲೆ ಬರೆ ಹಾಕಿದಂತಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments