Select Your Language

Notifications

webdunia
webdunia
webdunia
webdunia

ಪೆಟ್ರೋಲ್, ಹಾಲು, ತರಕಾರಿ ಬಳಿಕ ಈಗ ಆಟೋ ಕೂಡಾ ದುಬಾರಿ: ಇದೆಲ್ಲಾ ಗ್ಯಾರಂಟಿಗೆ ಸಿಕ್ಕ ಪ್ರತಿಫಲ

Ramalinga Reddy

Krishnaveni K

ಬೆಂಗಳೂರು , ಗುರುವಾರ, 27 ಜೂನ್ 2024 (10:18 IST)
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ಒಂದಾದ ಮೇಲೊಂದರಂತೆ ಬೆಲೆ ಏರಿಕೆ ಮಾಡುತ್ತಿದೆ. ಪೆಟ್ರೋಲ್, ಡೀಸೆಲ್, ಹಾಲು ಬಳಿಕ ಈಗ ಆಟೋ ಕೂಡಾ ದುಬಾರಿಯಾಗುವ ಸುಳಿವು ಸಿಕ್ಕಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಳಿಕ ಈಗ ಆಟೋ ಕೂಡಾ ದುಬಾರಿಯಾಗುವ ಸಾಧ್ಯತೆಯಿದೆ. ಈ ಸುಳಿವನ್ನು ಸ್ವತಃ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದರಿಂದ ಆಟೋದವರೂ ದರ ಏರಿಕೆ ಮಾಡಲು ಮನವಿ ಸಲ್ಲಿಸಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಈ ಪ್ರಸ್ತಾವನೆಯನ್ನು ಸಾರಿಗೆ ಆಯುಕ್ತರಿಗೆ ಕಳುಹಿಸಲಾಗಿದೆ.  ಅವರು ಕಮಿಟಿಯೊಂದಿಗೆ ಚರ್ಚಿಸಿ ನಿರ್ಧಾರ ಮಾಡಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಉದ್ಯೋಗಿಗಳ ಸಂಬಳ ಹೆಚ್ಚಳವಾಗುವಂತೆ ಇದೂ ಆಗುತ್ತದೆ ಎಂದು ಸಚಿವರು ಉತ್ತರಿಸಿದ್ದು, ಆಟೋ ದರ ಹೆಚ್ಚಳವಾಗುವುದು ಖಚಿತಪಡಿಸಿದ್ದಾರೆ.

ಇದೆಲ್ಲಾ ಗ್ಯಾರಂಟಿ ಯೋಜನೆಗಳ ಫಲವೇ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತೀ ಬಾರಿ ಒಂದೊಂದು ನೆಪ ಹೇಳಿ ಸರ್ಕಾರ ಒಂದೊಂದರದ್ದೇ ಬೆಲೆ ಏರಿಕೆ ಮಾಡುತ್ತಿದ್ದರೆ ಜನ ಜೀವನ ದುಸ್ತರವಾಗುತ್ತಿದೆ. ಈ ಚಂದಕ್ಕೆ ಗ್ಯಾರಂಟಿಗಳು ಬೇಕಿತ್ತಾ ಎಂದು ಜನ ಮಾತನಾಡಿಕೊಳ್ಳುವಂತಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಲ್ ಕೆ ಅಡ್ವಾಣಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು