Webdunia - Bharat's app for daily news and videos

Install App

ತನಿಖೆ ವರದಿ ಬಂದ ನಂತರವೇ ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ

Webdunia
ಗುರುವಾರ, 14 ಏಪ್ರಿಲ್ 2022 (17:00 IST)
ಸಂತೋಷ್ ಅವರ ಆತ್ಮಹತ್ಯೆ ಪ್ರಕರಣ ಸಂಪೂರ್ಣವಾಗಿ ತನಿಖೆಯಾಗಲಿದ್ದು, ಸತ್ಯ ಹೊರಬರಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ಆರ್.ಟಿ. ನಗರದ ನಿವಾಸದಲ್ಲಿ  ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ತಮ್ಮ ಕಾಲದಲ್ಲಿ ಹಲವಾರು ಕೊಲೆಗಳಾಗಿ, ಆ ಕೊಲೆ ಮಾಡಿದ ಸಂಘಟನೆಗಳ ಮೇಲಿನ ಪ್ರಕರಣಗಳನ್ನು ಹಿಂಪಡೆದು ರಾಜ್ಯದಲ್ಲಿ ಅರಾಜಕತೆ ಇದ್ದದ್ದರಿಂದಲೇ ಜನ ಕಾಂಗ್ರೆಸ್ ನ್ನು ತಿರಸ್ಕರಿಸಿದ್ದಾರೆ. ಅವರಿಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ ಎಂದರು.
ಆಧಾರರಹಿತ ಆರೋಪಗಳಿಗೆ ನಾವು ಪ್ರತಿಕ್ರಿಯೆ ನೀಡುವುದಿಲ್ಲ. ಆಧಾರಗಳಿದ್ದರೆ ಕೊಡಲಿ ತನಿಖೆ ಮಾಡಿಸುತ್ತೇವೆ. ಸದ್ಯಕ್ಕೆ ಪ್ರಾಥಮಿಕ ತನಿಖೆಯಾಗಲಿದೆ. ಅದರ ಆಧಾರದ ಮೇಲೆ ಏನಾಗಲಿದೆ ಎಂದು ನೋಡೋಣ. ತನಿಖೆಯ ವರದಿ ಬರುವವರೆಗೆ ಯಾವುದೇ ಕ್ರಮ ಇಲ್ಲ ಎಂದರು.
ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜಿನಾಮೆ ಬಗ್ಗೆ ತನಿಖೆಯ ವರದಿ ಬರುವವರೆಗೆ ಯಾವುದೇ ಕ್ರಮ ಇಲ್ಲ. ಇದರಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಏನಿಲ್ಲ. ವರಿಷ್ಠರು ಮಾಹಿತಿಯನ್ನು ಪಡೆದಿದ್ದಾರೆ. ಅವರ ಪಾತ್ರ ಇದರಲ್ಲಿ ಇಲ್ಲ. ನಿನ್ನೆ ರಾತ್ರಿಯೇ ಶವಪರೀಕ್ಷೆಯಾಗಿದೆ. ಪ್ರಾಥಮಿಕ ತನಿಖೆಯಾಗಲಿ. ತನಿಖೆಯ ಆಧಾರದ ಮೇಲೆ ತೀರ್ಮಾನ ಮಾಡಲಾಗುವುದು ಎಂದರು.
ಸಿಎಂ ಕಚೇರಿಯಲ್ಲಿ ಲಂಚ ಪಡೆಯಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ಆರೋಪ ಮಾಡಿರುವ ಬಗ್ಗೆ ಸುದ್ದಿದಾರರಿಗೆ ಪ್ರತಿಕ್ರಿಯೆ ನೀಡಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಿದ್ದಾಗ ಲಂಚದ ಆರೋಪಗಳು ಬಂದಿವೆ.  ಬಿ.ಡಿಎ ನಲ್ಲಿ ದೊಡ್ಡ ಹಗರಣವಾಗಿತ್ತು. ಆರೋಪಗಳು ಬಂದಿವೆ. ಅವರಿಗೆ ಯಾವ ಹಕ್ಕಿದೆ. ಏನಾದರೂ ಇದ್ದರೆ, ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಪ್ರಕರಣದ ಬಗ್ಗೆ ತಿಳಿಸಿದರೆ ತನಿಖೆ ಮಾಡುತ್ತೇವೆ ಎಂದರು.
ಗೋವಿಂದ ಕಾರಜೋಳ ಹಾಗೂ ಸುಧಾಕರ್ ಅವರ ವಿರುದ್ಧವೂ ಆರೋಪಗಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಯಾರೇ ಇರಲಿ. ಯಾವುದೇ ಕಚೇರಿ ಇರಲಿ ನಿರ್ದಿಷ್ಟ ಆರೋಪಗಳಿದ್ದರೆ ಅದಕ್ಕೆ  ಉತ್ತರ, ಪ್ರತಿಕ್ರಿಯೆ ನೀಡಬಹುದು ಎಂದರು.
ಗುತ್ತಿಗೆದಾರರ ಸಂಘ ಪ್ರತಿಭಟನೆ ಮಾಡುವ ಬಗ್ಗೆ ಉತ್ತರಿಸಿ,  ಹಲವಾರು ಗುತ್ತಿಗೆದಾರರ ಸಂಘಗಳಿವೆ.  ಅವರ ತೀರ್ಮಾನಗಳೇನು ಎಂದು ಗೊತ್ತಿಲ್ಲ. ಏನಾದರೂ ನಿರ್ದಿಷ್ಟ ಪ್ರಕರಣಗಳಿದ್ದರೆ ಕೊಡಲಿ. ತನಿಖೆ ಮಾಡಿಸುತ್ತೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments