Select Your Language

Notifications

webdunia
webdunia
webdunia
webdunia

ಎಚ್ ಡಿ ರೇವಣ್ಣ ಬೆನ್ನಲ್ಲೇ ಪ್ರಜ್ವಲ್‌ಗೂ ಬಂಧನದ ಭೀತಿ

Prajwal Revanna Pendrive

Sampriya

ಬೆಂಗಳೂರು , ಶನಿವಾರ, 4 ಮೇ 2024 (20:54 IST)
Photo Courtesy X
ಬೆಂಗಳೂರು: ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಎಚ್ ಡಿ ರೇವಣ್ಣ ಸಬಂಧನದ ಬೆನ್ನಲ್ಲೇ ಇದೀಗ ಮಗ ಸಂಸದ ಪ್ರಜ್ವಲ್ ರೇವಣ್ಣಗೂ ಬಂಧನ ಸಂಕಷ್ಟ ಎದುರಾಗಿದೆ.

ಹಲವು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ, ಬೆದರಿಕೆ ಮತ್ತು ಅಪಹರಣ ಪ್ರಕರಣ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶ ತೊರೆದಿದ್ದು, ಅವರ ವಿರುದ್ಧ ಸಿಬಿಐ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣ ಕುರಿತು ಎಸ್‌ಐಟಿ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಜ್ವಲ್ ಬಂಧನಕ್ಕೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ವ್ಯಕ್ತಿಯ ಪತ್ತೆಗೆ ತನ್ನ ಸದಸ್ಯ ರಾಷ್ಟ್ರಗಳಿಂದ ಮಾಹಿತಿ ಸಂಗ್ರಹಿಸಿ ಅಂತರರಾಷ್ಟ್ರೀಯ ಪೊಲೀಸ್ ಸಹಕಾರ ಕೋರುವ ಬ್ಲೂ ಕಾರ್ನರ್ ನೋಟಿಸ್ ಅನ್ನು ಜಾರಿಗೊಳಿಸಲಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಡ್ಜ್ ಮುಂದೆ ಹಾಜರಾಗುವ ಮುನ್ನಾ ಆಸ್ಪತ್ರೆಗೆ ರೇವಣ್ಣ