ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣದಲ್ಲಿ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡ ಬೆನ್ನಲ್ಲೇ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಜಿ.ಟಿ.ದೇವೇಗೌಡ ಸೇರಿ ಹಲವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.
ದೇಶದಲ್ಲೇ ಸಂಚಲನ ಮೂಡಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣರ ಲೈಂಗಿಕ ದೌರ್ಜನ್ಯ ಪ್ರಕರಣವು ಜೆಡಿಎಸ್‌ಗೆ ಮುಜುಗರ ತಂದಿದೆ.
ಇದೀಗ ರೇವಣ್ಣ ಅವರನ್ನೂ ಪಕ್ಷದಿಂದ ಅಮಾನತುಗೊಳಿಸಲು ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗೊಂದು ವೇಳೆ ಅಮಾನತುಗೊಳಿಸಿದರೆ ತಂದೆ-ಮಗ ಇಬ್ಬರೂ ಅಮಾನತಾದಂತಾಗುತ್ತದೆ.
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಕೇಸ್‌ನಲ್ಲಿ ಮೊದಲ ಆರೋಪಿಯಾಗಿರುವ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.