ಮುಂದಿನ ಏಳೆಂಟು ತಿಂಗಳುಗಳಲ್ಲಿ ಸಿಎಂ ಸಿದ್ದರಾಮಯ್ಯ ಸರಕಾರ ಹೋಗುತ್ತದೆ. ನಂತರ ನಮ್ಮ ಮುಂದೆ ಸೆಲ್ಯೂಟ್ ಹೊಡೆದು ನಿಲ್ಲಲೇಬೇಕು. ಆಗ ನಿಮ್ಮನ್ನು ನೋಡಿಕೊಳ್ಳುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿಸಿದ ಸಿಎಂ ಸಿದ್ರಾಮಯ್ಯಗೆ ನಾಚಿಕೆಯಾಗಬೇಕು. ಯಾವುದೇ ಕಾರಣವಿಲ್ಲದೇ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಅಟ್ರಾಸಿಟಿ ಕೇಸ್ ದಾಖಲಿಸಲಾಗಿದೆ. ಸುಳ್ಳು ಕೇಸ್ ಹಾಕಿರುವ ಪೊಲೀಸ್ ಅಧಿಕಾರಿಗಳ ಪಟ್ಟಿಯೇ ನಮ್ಮ ಬಳಿಯಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಬಲವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸ್ ದಾಖಲಿಸಿದಲ್ಲಿ, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಪಶ್ಚಾತಾಪ ಪಡಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.