Select Your Language

Notifications

webdunia
webdunia
webdunia
webdunia

ಅಮಿತ್ ಶಾ ಭೇಟಿಯ ನಂತರ ಪ್ರಮುಖರ ಸಭೆ ನಡೆಸಿ ರಾಜ್ಯ ನಾಯಕರು

ಅಮಿತ್ ಶಾ ಭೇಟಿಯ ನಂತರ ಪ್ರಮುಖರ ಸಭೆ ನಡೆಸಿ ರಾಜ್ಯ ನಾಯಕರು
ಬೆಂಗಳೂರು , ಸೋಮವಾರ, 1 ಜನವರಿ 2018 (18:06 IST)
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಭೇಟಿಯ ನಂತರ ಬೆಚ್ಚಿಬಿದ್ದಿರುವ ರಾಜ್ಯ ನಾಯಕರು ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಪ್ರಮುಖರ ಸಭೆ ನಡೆಸಿ ಹಲವು ವಿಷಯಗಳನ್ನು ಬಗ್ಗೆ ಚರ್ಚೆ ನಡೆಸಿದ್ದಾರೆ.
 
ಪರಿವರ್ತನಾ ಯಾತ್ರೆ ಯಶಸ್ವಿಯಾಗಿ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಕಾರ್ಯಕರ್ತರನ್ನು ಹುರಿದುಂಬಿಸಬೇಕು. ಜೊತೆಗೆ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಸಂಬಂಧ ಚರ್ಚೆ ನಡೆಸಲಾಯಿತು.
 
ಕೇಂದ್ರ ಸಚಿವ ಅನಂತಕುಮಾರ್, ಕೋರ್ ಕಮಿಟಿ ಸದಸ್ಯರಾದ ಪ್ರಹ್ಲಾದ್ ಜೋಷಿ, ನಳೀನ್‍ಕುಮಾರ್ ಕಟೀಲ್, ಜಗದೀಶ್ ಶೆಟ್ಟರ್, ಆರ್.ಅಶೋಕ್ ಸಭೆಯಲ್ಲಿ ಭಾಗವಹಿಸಿದ್ದರು.
 
ಭಾನುವಾರ ಬೆಂಗಳೂರಿಗೆ ಬಂದಿದ್ದ ಅಮಿತ್ ಶಾ ರಾಜ್ಯ ನಾಯಕರ ಜೊತೆಗೆ ನಡೆಸಿದ ಸಭೆಯಲ್ಲಿ ಪಕ್ಷದ ಸಂಘಟನೆಯ ಬಗ್ಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಹಾದಾಯಿ ವಿವಾದ ಕುರಿತು ಸಂಸದ ಸುರೇಶ ಅಂಗಡಿ ಜೊತೆಗೆ ಕೇಂದ್ರ ಸಚಿವ ಚರ್ಚೆ