Webdunia - Bharat's app for daily news and videos

Install App

ಮುಂದಿನ ಚುನಾವಣೆ ಬಳಿಕ ನಮ್ಮದೇ ಸರಕಾರ: ಸಿಎಂ

Webdunia
ಗುರುವಾರ, 28 ಸೆಪ್ಟಂಬರ್ 2017 (14:56 IST)
ಮುಂಬರುವ ವಿಧಾನಸಭೆ ಚುನಾವಣೆಯ ಬಳಿಕ ರಾಜ್ಯದಲ್ಲಿ ನಮ್ಮದೇ ಸರಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಜಿಲ್ಲೆಯ ಪಾವಗಡ ತಾಲೂಕಿನ ತಿರುಮಣಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಐದು ತಾಲೂಕುಗಳಿಗೆ ನೀರು ಹರಿಸುವ ಯೋಜನೆಯ ಶಂಕುಸ್ಥಾಪನೆಯನ್ನು ನಾವೇ ಮಾಡ್ತೇವೆ. ಉದ್ಘಾಟನೆಯನ್ನು ನಾವೇ ಮಾಡ್ತೇವೆ ಎಂದು ತಿಳಿಸಿದ್ದಾರೆ.
 
ಇದು ನನ್ನ ಯೋಜನೆ ಅಂತ ಎಲ್ಲೂ ಹೇಳ್ಕೋಬೇಡಪ್ಪ. ಇದು ತಿಮ್ಮರಾಯಪ್ಪ ಅವರಿಗೆ ಗೊತ್ತಿರುವ ವಿಷಯ ಎಂದು ಜೆಡಿಎಸ್ ಶಾಸಕ ತಿಮ್ಮರಾಯಪ್ಪಗೆ ಕಿಚಾಯಿಸಿದ ಸಿಎಂ, ತುಂಗಭದ್ರಾ ನೀರಿನ ಯೋಜನೆಯನ್ನು ನಾವೇ ಜಾರಿಗೆ ತರುತ್ತೇವೆ ಎಂದು ತಿಳಿಸಿದ್ದಾರೆ.
 
 ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ನಂಚರ ಬಡವರ, ದೀನ ದಲಿತರ, ಶೋಷಿತರ ಏಳಿಗೆಗಾಗಿ ಹಗಲಿರಳು ಕರ್ತವ್ಯ ನಿರ್ವಹಿಸಿದೆ.  ನೀರಾವರಿ ಯೋಜನೆಗಳಿಗಾಗಿ ಸಾವಿರಾರು ಕೋಟಿ ರೂಪಾಯಿಗಳನ್ನು ಸರಕಾರ ಆದ್ಯತೆ ಮೇರೆಗೆ ಬಿಡುಗಡೆ ಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments