Select Your Language

Notifications

webdunia
webdunia
webdunia
Saturday, 5 April 2025
webdunia

ಗುಂಡಿನ ದಾಳಿ ಬೆನ್ನಲ್ಲೇ ಸಲ್ಮಾನ್ ಖಾನ್‌ ಮನೆ ಸುತ್ತಾ ಹೆಚ್ಚಿಸಿದ ಭದ್ರತೆ, ತನಿಖೆ ಚುರುಕು

Salman Khan House

Sampriya

ಮಹಾರಾಷ್ಟ್ರ , ಭಾನುವಾರ, 14 ಏಪ್ರಿಲ್ 2024 (19:20 IST)
Photo Courtesy X
ಮಹಾರಾಷ್ಟ್ರ: ಮುಂಬೈನ ಬಾಂದ್ರಾದಲ್ಲಿರುವ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ಮನೆ ಮೇಲೆ ಗುಂಡಿನ ದಾಳಿ ನಡೆಸಿದ ಬೆನ್ನಲ್ಲೇ ಅವರ ಮನೆ ಸುತ್ತಾಮುತ್ತ  ಭದ್ರತೆಯನ್ನು ಹೆಚ್ಚಿಸಿದ್ದು, ತನಿಖೆ ಚುರುಕುಗೊಂಡಿದೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಮೂರು ಸುತ್ತು ಗುಂಡು ಹಾರಿಸಲಾಗಿದೆ. ಮುಂಬೈ ಪೊಲೀಸರ ಅಪರಾಧ ವಿಭಾಗವು ತನಿಖೆಗಾಗಿ ಸ್ಥಳಕ್ಕೆ ತಲುಪಿದೆ ಎಂದು ಅವರು ಹೇಳಿದರು.

"ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಇಬ್ಬರು ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. 3 ಸುತ್ತಿನ ಗುಂಡಿನ ದಾಳಿಯ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಮುಂಬೈ ಪೊಲೀಸರ ಅಪರಾಧ ವಿಭಾಗವು ತನಿಖೆಗಾಗಿ ಸ್ಥಳಕ್ಕೆ ತಲುಪಿದೆ" ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ನಟನ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ವಿಧಿವಿಜ್ಞಾನ ತಂಡವೂ ಸ್ಥಳದಲ್ಲಿದೆ. ಆರೋಪಿಗಳನ್ನು ಗುರುತಿಸಲು ನಾವು ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್‌ಗೆ 'ಭಾರತ್ ಮಾತಾ ಕೀ ಜೈ' ಎನ್ನಲೂ ಭಯ: ಸಿದ್ದರಾಮಯ್ಯ ತವರಿನಲ್ಲಿ ಗುಡುಗಿದ ಮೋದಿ