Select Your Language

Notifications

webdunia
webdunia
webdunia
webdunia

ಅಂತ್ಯವಾಗದ ಸಂಕಷ್ಟ: ಕಾವೇರಿಗಾಗಿ ಮತ್ತೆ ಸರ್ವಪಕ್ಷ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಅಂತ್ಯವಾಗದ ಸಂಕಷ್ಟ: ಕಾವೇರಿಗಾಗಿ ಮತ್ತೆ ಸರ್ವಪಕ್ಷ ಸಭೆ ಕರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಶುಕ್ರವಾರ, 30 ಸೆಪ್ಟಂಬರ್ 2016 (17:31 IST)
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವಂತೆ ಮತ್ತೆ ಸುಪ್ರೀಂಕೋರ್ಟ್ ಖಡಕ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ನಾಳೆ ಮತ್ತೆ ಸರ್ವಪಕ್ಷ ಸಭೆ ಕರೆಯಲಾಗಿದೆ. 
 
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಾಳೆ ಸಂಜೆ 5.30 ಕ್ಕೆ ಸರ್ವಪಕ್ಷ ಸಭೆ ನಡೆಯಲಿದೆ. 
 
ಈ ಮಹತ್ವದ ಸರ್ವಪಕ್ಷ ಸಭೆಯಲ್ಲಿ ಸುಪ್ರೀಂಕೋರ್ಟ್ ಆದೇಶ ಪಾಲನೆ ಕುರಿತು ಹಾಗೂ ಸರಕಾರದ ಮುಂದಿನ ಹೋರಾಟದ ರೂಪುರೇಷಗಳ ಕುರಿತು ಚರ್ಚೆ ನಡೆಯಲಿದ್ದು, ಸಂಸದರು, ವಿಧಾನಮಂಡಲದ ಉಭಯ ಸದನ ನಾಯಕರು, ಕಾವೇರಿ ಜಲಾಯನ ಪ್ರದೇಶದ ಶಾಸಕರು ಹಾಗೂ ಉಸ್ತುವಾರಿ ಸಚಿವರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಸುಪ್ರೀಂಕೋರ್ಟ್ ಡಬಲ್ ಶಾಕ್ ನೀಡಿದ್ದು, ಕಾವೇರಿ ನದಿಯಿಂದ ತಮಿಳುನಾಡಿಗೆ ಅಕ್ಟೋಬರ್ 1 ರಿಂದ 6 ರವರೆಗೂ 6 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಹಾಗೂ ಕೇವಲ ನಾಲ್ಕು ದಿನಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡವಂತೆ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ನಿರ್ವಹಣಾ ಮಂಡಳಿಗೆ ಕನ್ನಡಿಗರ ವಿರೋಧ: ಟಿ.ಎ.ನಾರಾಯಣಗೌಡ